×
Ad

ದ.ಕ. ಜಿಲ್ಲಾದ್ಯಂತ ಭಾರೀ ಮಳೆ: ಅನೇಕ ಪ್ರದೇಶಗಳು ಜಲಾವೃತ, ಅಪಾರ ಹಾನಿ

Update: 2025-05-30 07:15 IST

ಮಂಗಳೂರು: ದ.ಕ.ಜಿಲ್ಲಾದ್ಯಂತ ಕಳೆದ ರಾತ್ರಿಯಿಂದ ಭಾರೀ ಮಳೆಯಾಗಿದ್ದು, ಅಪಾರ ಹಾನಿಯಾಗಿದೆ. ಮಂಗಳೂರು ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಸತತ ಮಳೆಯಾಗಿದ್ದು, ಅಲ್ಲಲ್ಲಿ ಮನೆ, ಕಾಂಪೌಂಡ್ ಕುಸಿತಗೊಂಡಿವೆ. ಮರಗಳು ಉರುಳಿವೆ. ಭಾರೀ ಮಳೆಯಿಂದ ಜಲಾವೃತಗೊಂಡ ನಗರದ ಮಿಷನ್ ಸ್ಟ್ರೀಟ್ ರಸ್ತೆ ಮತ್ತು ರಾವ್ ಆ್ಯಂಡ್ ರಾವ್ ವೃತ್ತ, ಕೊಪ್ಪರ ಹಿತ್ಲು ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿ ಅಪಾಯದಲ್ಲಿ ಸಿಲುಕಿದ್ದ ಜನರನ್ನು ರಕ್ಷಣೆ ಮಾಡಲಾಗಿದೆ.

ಮಂಗಳೂರು ಮಹಾನಗರ ಪಾಲಿಕೆಯ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಅನೇಕ ಪ್ರದೇಶಗಳು ಜಲಾವೃತಗೊಂಡಿವೆ. ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅಪಾರ ನಷ್ಟ ಉಂಟಾಗಿದೆ.

ನಗರದ ಹಲವು ಕಡೆಗಳಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಿದ ಡಿವೈಎಫ್‌ಐ ಸಂಘಟನೆಯ ಕಾರ್ಯಕರ್ತರು ಅಪಾಯದಲ್ಲಿದ್ದ ಜನರನ್ನು ಸುರಕ್ಷಿತ ಸ್ಥಳಕ್ಕೆ ತಲುಪಿಸಿದರು.

ಕಾರ್ಯಚರಣೆಯಲ್ಲಿ ಡಿವೈಎಫ್‌ಐ ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಝ್, ನಝೀರ್ ಕುದ್ರೋಳಿ, ದೀಕ್ಷಿತ್ ಕುತ್ತಾರ್, ಸಿದ್ದೀಕ್, ರಿಹಾಬ್ ಬಂದರ್ ಮತ್ತಿತರರು ಪಾಲ್ಗೊಂಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News