ಭಾರಿ ಮಳೆ: ಇಂದು (ಆ.28) ದಕ್ಷಿಣ ಕನ್ನಡ ಜಿಲ್ಲೆಯ 6 ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ
Update: 2025-08-28 06:43 IST
ಮಂಗಳೂರು:ಆ.28: ಭಾರೀ ಮಳೆಯ ಹಿನ್ನಲೆಯಲ್ಲಿ ಮಂಗಳೂರು,ಬಂಟ್ವಾಳ ಮತ್ತು ಉಳ್ಳಾಲ ತಾಲೂಕಿನ ಎಲ್ಲಾ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ಹಾಗೂ ಮುಲ್ಕಿ, ಮೂಡುಬಿದಿರೆ, ಪುತ್ತೂರು ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಆ.28ರ ಗುರುವಾರ ರಜೆ ಘೋಷಿಸಲಾಗಿದೆ.