×
Ad

ದ.ಕ. ಲೋಕಸಭಾ ಕ್ಷೇತ್ರದ ಬಿಜೆಪಿ ಚುನಾವಣೆ ಕಚೇರಿ ಉದ್ಘಾಟನೆ

Update: 2024-02-15 15:57 IST

ಮಂಗಳೂರು, ಫೆ.15: ದಕ್ಷಿಣ ಕನ್ನಡ ಲೋಕ ಸಭಾ ಕ್ಷೇತ್ರದ ಬಿಜೆಪಿ ಚುನಾವಣಾ ಕಚೇರಿಯನ್ನು ನಗರದ ಬಂಟ್ಸ್ ಹಾಸ್ಟೆಲ್ ವೃತ್ತದ ಬಳಿ ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, 2004ರಿಂದಲೂ ಪಕ್ಷದ ಚುನಾವಣಾ ಕಚೇರಿ ಬಂಟ್ಸ್ ಹಾಸ್ಟೆಲ್ ವೃತ್ತದಲ್ಲಿ ಆರಂಭಿಸಲಾಗಿತ್ತು ಆ ಬಳಿಕ ಪ್ರತಿ ಚುನಾವಣೆಯಲ್ಲೂ ಈ ಕಚೇರಿ ಗೆಲುವಿನ ಕೇಂದ್ರವಾಗಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ 1.70 ಲಕ್ಷಕ್ಕೂ ಅಧಿಕ ಮತಗಳಿಂದ ಜಯ ಗಳಿಸಿತ್ತು. ಈ ಬಾರಿ ಸುಮಾರು 3.50 ಲಕ್ಷ ಮತಗಳ ಅಂತರದಿಂದ ಬಿಜೆಪಿ ಜಯ ಗಳಿಸಲಿದೆ ಕೇಂದ್ರ ದಲ್ಲಿ ಮತ್ತೆ ನರೇಂದ್ರ ಮೋದಿ ನೇತೃತ್ವದ ಸರಕಾರ ರಚನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತ ಪಡಿಸಿದರು.

ದ.ಕ. ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ನಿಕಟ ಪೂರ್ವ ಅಧ್ಯಕ್ಷ ಸುದರ್ಶನ್ ಮೂಡುಬಿದಿರೆ, ಮಾಜಿ ಸಚಿವ ನಾಗರಾಜ ಶೆಟ್ಟಿ, ಮನಪಾ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ ಹಾಗೂ ಪಕ್ಷದ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News