×
Ad

ಉಳ್ಳಾಲ ಖಾಝಿಯಾಗಿ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ. ಉಸ್ತಾದ್ ನೇಮಕ

Update: 2024-07-21 16:25 IST

ಉಳ್ಳಾಲ: ಉಳ್ಳಾಲ ಖಾಝಿಯಾಗಿ ಇಂಡಿಯನ್ ಗ್ರ್ಯಾಂಡ್ ಮುಪ್ತಿ ಸುಲ್ತಾನುಲ್ ಉಲಮಾ ಕಾಂತಪುರಂ ಎ.ಪಿ. ಅಬೂಬಕ್ಕರ್ ಮುಸ್ಲಿಯಾರ್ ಅವರನ್ನು ಆಯ್ಕೆ ಮಾಡಲಾಗಿದೆ.

ಖಾಝಿ ಆಯ್ಕೆಗೆ ಸಂಬಂಧಿಸಿ ಉಳ್ಳಾಲ ದರ್ಗಾ ವಠಾರದ ಮದನಿ ಹಾಲಿನಲ್ಲಿ ರವಿವಾರ ಮಧ್ಯಾಹ್ನ ನಡೆದ ಮಹಾಸಭೆ ಯಲ್ಲಿ ಎ.ಪಿ. ಉಸ್ತಾದ್ ಅವರನ್ನು ಖಾಝಿಯಾಗಿ ನೇಮಕ ಮಾಡಲು ಸರ್ವಾನುಮತದಿಂದ ತೀರ್ಮಾನಿಸಲಾಗಿದೆ. ಆಗಸ್ಟ್ 5ರಂದು ಅಧಿಕಾರ ಸ್ವೀಕಾರ ನಡೆಯಲಿದೆ ಎಂದು ದರ್ಗಾ ಅಧ್ಯಕ್ಷರಾದ ಬಿ.ಜಿ ಹನೀಫ್ ಹಾಜಿ ಮತ್ತು ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಶಿಹಾಬುದ್ದೀನ್ ಸಖಾಫಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.








 


 


 



 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News