ದ.ಕ. ಜಿಲ್ಲೆಯಾದ್ಯಂತ ಭಾರೀ ಮಳೆ: ಮದ್ರಸಗಳಿಗೆ ರಜೆ ನೀಡಲು ಆಡಳಿತ ಮಂಡಳಿಗಳಿಗೆ ಸೂಚನೆ
Update: 2025-05-25 20:06 IST
ಮಂಗಳೂರು: ದ.ಕ. ಜಿಲ್ಲೆಯಾದ್ಯಂತ ತೀವ್ರ ಮಳೆಯಾಗುತ್ತಿದ್ದು, ಗಾಳಿ ಕೂಡಾ ಬಲವಾಗಿ ಬೀಸುತ್ತಿವೆ. ಈ ನಿಟ್ಟಿನಲ್ಲಿ ಮಕ್ಕಳ ಸುರಕ್ಷತೆ ದೃಷ್ಠಿಯಿಂದ ಜಿಲ್ಲೆಯಲ್ಲಿರುವ ಎಲ್ಲ ಮದರಸಗಳ ಆಡಳಿತ ಮಂಡಳಿಗಳು ಹಾಗೂ ಸದರ್ ಉಸ್ತಾದರು ಮೇ 25 ಮತ್ತು 26ರಂದು ಮದ್ರಸಗಳಿಗೆ ರಜೆ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳಲು ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿ ಸೂಚಿಸಿದೆ.
ಮುಂದಿನ ದಿನಗಳಲ್ಲಿ ತೀವ್ರ ಮಳೆ ಆಗುವ ಸಂದರ್ಭ ದ.ಕ.ಜಿಲ್ಲಾಧಿಕಾರಿ ಶಾಲೆಗಳಿಗೆ ರಜೆ ನೀಡಿ ಆದೇಶಿಸಿದರೆ ಮದ್ರಸಗಳಿಗೂ ರಜೆ ನೀಡಲು ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಬಿ.ಎ. ಅಬ್ದುಲ್ ನಾಸೀರ್ ಲಕ್ಕಿಸ್ಟಾರ್ ಸೂಚಿಸಿದ್ದಾರೆ.