×
Ad

ಜ. 16 ರಿಂದ ಕಾಜೂರು ಉರೂಸ್

ಜ. 22ರಂದು ಬೃಹತ್ ದ್ಸಿಕ್ರ್ ಮಜ್ಲಿಸ್ | ಜ.25ರಂದು ಉರೂಸ್ ಸಮಾರೋಪ, ಅನ್ನದಾನ

Update: 2026-01-14 13:13 IST

ಬೆಳ್ತಂಗಡಿ: ಸುಮಾರು ಎಂಟು ಶತಮಾನಗಳಿಗೂ ಅಧಿಕ ಇತಿಹಾಸ ಹೊಂದಿರುವ ಕಾಜೂರು ದರ್ಗಾ ಶರೀಫ್‌ನಲ್ಲಿ ಈ ವರ್ಷದ ಉರೂಸ್ ಕಾರ್ಯಕ್ರಮವು ಜನವರಿ 16ರಿಂದ 25ರವರೆಗೆ ವಿವಿಧ ಧಾರ್ಮಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ.

ಕಾಜೂರು ಮತ್ತು ಕಿಲ್ಲೂರು ಜಂಟಿ ಜಮಾಅತ್‌ಗಳ ಆಶ್ರಯದಲ್ಲಿ ರಚನೆಯಾಗಿರುವ ಉರೂಸ್ ಸಮಿತಿಯ ನೇತೃತ್ವದಲ್ಲಿ ಕಾರ್ಯಕ್ರಮಗಳು ನಡೆಯಲಿವೆ ಎಂದು ಉರೂಸ್ ಸಮಿತಿ ಅಧ್ಯಕ್ಷ ಕೆ.ಯು. ಇಬ್ರಾಹಿಂ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಗೌರವಾಧ್ಯಕ್ಷ ಸಯ್ಯಿದ್ ಕೆ.ಎಸ್. ಆಟಕೋಯ ತಂಙಳ್ ಕುಂಬೋಳ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಂಯುಕ್ತ ಜಮಾಅತ್ ಖಾಝಿ, ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ.ಪಿ. ಉಸ್ತಾದ್ ಅವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮಗಳು ನಡೆಯಲಿದ್ದು, ಸಯ್ಯಿದ್ ಕಾಜೂರು ತಂಙಳ್ ಉರೂಸ್ ಕಾರ್ಯಕ್ರಮಗಳ ನೇತೃತ್ವ ವಹಿಸಲಿದ್ದಾರೆ. ಸಯ್ಯಿದ್ ಇಸ್ಮಾಯಿಲ್ ತಂಙಳ್ ಸೇರಿದಂತೆ ಅನೇಕ ಸಯ್ಯಿದರುಗಳು ಹಾಗೂ ವಿವಿಧ ಜಮಾಅತ್ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

ಜನವರಿ 16ರಂದು ಕಿಲ್ಲೂರು ಮಸ್ಜಿದ್‌ನಿಂದ ವಿಶೇಷ ಸಂದಲ್ ಮೆರವಣಿಗೆ ಕಾಜೂರು ದರ್ಗಾಕ್ಕೆ ಆಗಮಿಸಲಿದ್ದು, ಸಂಜೆ 7 ಗಂಟೆಗೆ ಉರೂಸ್ ಸಮಿತಿ ಅಧ್ಯಕ್ಷ ಕೆ.ಯು. ಇಬ್ರಾಹಿಂ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಬಳಿಕ ಯೆನಪೋಯ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿ ವೈ. ಅಬ್ದುಲ್ಲ ಕುಂಞಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಈ ಸಮಾರಂಭದಲ್ಲಿ ಡಾ. ಯು.ಟಿ. ಇಫ್ತಿಕಾರ್ ಅಲಿ ಭಾಗವಹಿಸಲಿದ್ದಾರೆ.

ಉರೂಸ್ ಪ್ರಯುಕ್ತ ಹತ್ತು ದಿನಗಳ ಕಾಲ ಪ್ರತಿದಿನ ರಾತ್ರಿ ಕರ್ನಾಟಕ ಹಾಗೂ ಕೇರಳದ ಪ್ರಸಿದ್ಧ ವಾಗ್ಮಿಗಳಿಂದ ಧಾರ್ಮಿಕ ಪ್ರವಚನಗಳು ನಡೆಯಲಿದ್ದು, ಈ ಉಪನ್ಯಾಸ ಮಾಲಿಕೆಯನ್ನು ಸಯ್ಯಿದ್ ಕಾಜೂರು ತಂಙಳ್ ಉದ್ಘಾಟಿಸಲಿದ್ದಾರೆ. ಜನವರಿ 18ರಂದು ಮದನೀಯಂ ಮಜ್ಲಿಸ್, ಜನವರಿ 21ರಂದು ಪೆರುಮುಗಂ ಅಶ್ರಫ್ ಉಸ್ತಾದ್ ಅವರ ನೇತೃತ್ವದಲ್ಲಿ ಇಸ್ಲಾಮಿಕ್ ಕಥಾಪ್ರಸಂಗ ನಡೆಯಲಿದೆ.

ಜನವರಿ 22ರಂದು ಆಧ್ಯಾತ್ಮಿಕ ಕಾರ್ಯಕ್ರಮವಾದ ಬೃಹತ್ ದ್ಸಿಕ್ರ್ ಮಜ್ಲಿಸ್ ಸಯ್ಯಿದ್ ಅಬ್ದುರ್ರಹ್ಮಾನ್ ಇಂಬಿಚ್ಚಿಕೋಯ ತಂಙಳ್ ಅಲ್ ಬುಖಾರಿ ಬಾಯಾರ್ ಅವರ ನೇತೃತ್ವದಲ್ಲಿ ನಡೆಯಲಿದೆ. ಡಾ. ಕಾವಳಕಟ್ಟೆ ಹಝ್ರತ್ ಸೇರಿದಂತೆ ಅನೇಕ ಉಲಮಾ ಪ್ರಮುಖರು ಭಾಗವಹಿಸಲಿದ್ದಾರೆ.

ಜನವರಿ 23ರಂದು ಕಾಜೂರು ಮಹಿಳಾ ಶರೀಅತ್ ಕಾಲೇಜಿನ ವಿದ್ಯಾರ್ಥಿನಿಯರಿಗೆ ಧಾರ್ಮಿಕ ಪದವಿ ಪ್ರದಾನ ಸಮಾರಂಭವು ಮರ್ಹೂಮ್ ಸಯ್ಯಿದ್ ಕಾಜೂರು ತಂಙಳ್ ಬೀಬಿಯವರ ಹೆಸರಿನಲ್ಲಿ ಎರಡನೇ ವೇದಿಕೆಯಲ್ಲಿ ನಡೆಯಲಿದೆ.

ಜನವರಿ 25ರಂದು ಉರೂಸ್ ಸಮಾರೋಪ

ಬೆಳಿಗ್ಗೆ ಉರೂಸ್ ಧಾರ್ಮಿಕ ಸಮಾರಂಭ ನಡೆಯಲಿದ್ದು, ಸಯ್ಯಿದ್ ಕುಂಬೋಳ್ ತಂಙಳ್ ಅಧ್ಯಕ್ಷತೆ ವಹಿಸಲಿದ್ದಾರೆ. ತೈಬಾ ಮರ್ಕಝ್ ಚೇರ್ಮನ್ ಸಯ್ಯಿದ್ ಸಾದಾತ್ ತಂಙಳ್ ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಸಂಜೆ ಸಮಾರೋಪ ಸಮಾರಂಭಕ್ಕೆ ಸುಲ್ತಾನುಲ್ ಉಲಮಾ, ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ. ಉಸ್ತಾದ್ ನೇತೃತ್ವ ವಹಿಸಲಿದ್ದಾರೆ.

ಈ ಸಮಾರಂಭದಲ್ಲಿ ಸಮಾರಂಭದಲ್ಲಿ ವಿಧಾನ ಸಭಾ ಸ್ಪೀಕರ್ ಯು.ಟಿ ಖಾದರ್, ವಕ್ಫ್ ಸಚಿವ ಬಿ.ಝೆಡ್ ಝಮೀರ್ ಅಹಮ್ಮದ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ದ.ಕ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ, ಮೆಸ್ಕಾಂ ನಿಗಮಾಧ್ಯಕ್ಷ ಕೆ ಹರೀಶ್ ಕುಮಾರ್, ವಿಧಾನ ಪರಿಷತ್ ಶಾಸಕರುಗಳಾದ ಬಿ.ಕೆ ಹರಿಪ್ರಸಾದ್ ಮತ್ತು ಐವನ್ ಡಿಸೋಜ, ಮಾಜಿ ಸಚಿವರುಗಳಾದ ಬಿ ರಮಾನಾಥ ರೈ, ಗಂಗಾಧರ ಗೌಡ, ಮಾಜಿ ಶಾಸಕರುಗಳಾದ ಬಿ.ಎ ಮೊಯಿದಿನ್ ಬಾವಾ, ಬಿ.ಎಂ ಫಾರೂಕ್, ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷ ಮೌಲಾನಾ ಶಾಫಿ ಸಅದಿ ಬೆಂಗಳೂರು, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ ಗೂಫೂರ್, ಕಾರ್ಮಿಕ ನಿಗಮದ ಅಧ್ಯಕ್ಷ ಟಿ.ಎಂ ಶಹೀದ್ ತೆಕ್ಕಿಲ್, ಆರೋಗ್ಯ ಸಚಿವರ ಆಪ್ತ ಕಾರ್ಯದರ್ಶಿ ಕೆ.ಎ ಹಿದಾಯತುಲ್ಲ ಬೆಸ್ಟ್ ಫೌಂಡೇಶನ್ ಸಂಸ್ಥಾಪಕ ರಕ್ಷಿತ್ ಶಿವರಾಂ, ವಕ್ಫ್ ಸಲಹಾ ಸಮಿತಿ ನಿಕಟಪೂರ್ವಾಧ್ಯಕ್ಷ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್, ಎಸ್.ಡಿ.ಪಿ.ಐ ರಾಜ್ಯಾಧ್ಯಕ್ಷ ಅಬ್ದುಲ್‌ ಮಜೀದ್ ಕೊಡ್ಲಿಪೇಟೆ, ಇನಾಯತ್ ಆಲಿ, ಕಣಚೂರು ಮೋಣು ಹಾಜಿ, ಶಾಕಿರ್ ಹಾಜಿ ಐಶಂ, ಅಬ್ದುಲ್ ಕೆರೀಮ್ ಗೇರುಕಟ್ಟೆ, ಝಕರಿಯಾ ಹಾಜಿ ಜೋಕಟ್ಟೆ, ರಾಹ ಇಂಗ್ಲಿಷ್ ಮೀಡಿಯಂ ಸ್ಕೂಲ್ ಅಕಾಡಮಿಕ್ ಡೈರೆಕ್ಟರ್ ಸಿದ್ದೀಕ್ ಮೋಂಟುಗೋಳಿ, ಮೊದಲಾದವರು ಭಾಗವಹಿಸಲಿದ್ದಾರೆ.

ವಿವಿಧ ದಿನಗಳಲ್ಲಿ ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದ್, ಸಯ್ಯಿದ್ ಜಿಫ್ರಿ ತಂಙಳ್ ಬೆಳ್ತಂಗಡಿ, ಸಯ್ಯಿದ್ ಕಿಲ್ಲೂರು ತಂಙಳ್, ಡಾ. ಝೈನಿ‌ ಉಸ್ತಾದ್, ಅಝೀಝ್ ದಾರಿಮಿ ಚೊಕ್ಕಬೆಟ್ಟು, ಮುಳ್ಳೂರ್‌ಕರೆ ಸಖಾಫಿ, ಹಾಫಿಳ್ ಸುಫಿಯಾನ್ ಸಖಾಫಿ ಮೊದಲಾದವರಲ್ಲದೆ ತಾಲೂಕು ಮತ್ತು ಜಿಲ್ಲೆಯ ಅನೇಕ ಸಯ್ಯಿದರುಗಳು, ಉಲಮಾಗಳು, ಸಾಮಾಜಿಕ- ಧಾರ್ಮಿಕ -ರಾಜಕೀಯ ನಾಯಕರುಗಳು ಭಾಗವಹಿಸಲಿದ್ದಾರೆ.

ಉರೂಸ್ ಅವಧಿಯಲ್ಲಿ ಪ್ರತಿದಿನ ಯಾತ್ರಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿದ್ದು, ಸಂಪ್ರದಾಯದಂತೆ ರವಿವಾರ ಬೆಲ್ಲದ ಗಂಜಿ ವಿತರಣೆ ನಡೆಯಲಿದೆ. ಉರೂಸ್ ಕೊನೆಯ ದಿನ ಸಾರ್ವಜನಿಕ ಮಹಾ ಅನ್ನದಾನ ನಡೆಯಲಿದೆ. ಜಾತಿ–ಧರ್ಮ ಭೇದವಿಲ್ಲದೆ ರಾಜ್ಯ ಹಾಗೂ ರಾಜ್ಯ ಹೊರಗಿನ ಅನೇಕ ಭಕ್ತರು ಉರೂಸ್‌ಗೆ ಆಗಮಿಸುವ ನಿರೀಕ್ಷೆಯಿದೆ.

ಪತ್ರಿಕಾಗೋಷ್ಠಿಯಲ್ಲಿ  ಕೆ.ಯು. ಇಬ್ರಾಹಿಂ ಕಾಜೂರು (ಉರೂಸ್ ಸಮಿತಿ ಅಧ್ಯಕ್ಷರು), ಅಬ್ದುಲ್ ಅಝೀಝ್ ಝುಹ್ರಿ ಕಿಲ್ಲೂರು (ಉರೂಸ್ ಸಮಿತಿ ಉಪಾಧ್ಯಕ್ಷರು), ಜೆ.ಹೆಚ್. ಅಬೂಬಕ್ಕರ್ ಸಿದ್ದೀಕ್ ಕಾಜೂರು (ಪ್ರಧಾನ ಕಾರ್ಯದರ್ಶಿ), ಅಶ್ರಫ್ ಕಿಲ್ಲೂರು (ಜೊತೆ ಕಾರ್ಯದರ್ಶಿ), ಡಿ.ವೈ. ಉಮರ್ (ಕೋಶಾಧಿಕಾರಿ), ಮಹಮ್ಮದ್ ಬಶೀರ್ ಅಹ್ಸನಿ ಕಾಜೂರು (ದರ್ಗಾ ಸಮಿತಿ ಉಪಾಧ್ಯಕ್ಷರು), ಅಬೂಬಕ್ಕರ್ ಮಲ್ಲಿಗೆಮನೆ (ಕೋಶಾಧಿಕಾರಿ, ಕಿಲ್ಲೂರು ಮಸ್ಜಿದ್) ಹಾಗೂ ಬದ್ರುದ್ದೀನ್ ಕಾಜೂರು (ಉರೂಸ್ ಸಮಿತಿ ಹಿರಿಯ ಸದಸ್ಯ) ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News