ಆತೂರು: ಮನೆಯ ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ನಗ, ನಗದು ಕಳ್ಳತನ
Update: 2024-01-05 09:00 IST
ಕಡಬ, ಜ.05: ಮನೆಯ ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ನಗ, ನಗದನ್ನು ದೋಚಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ ಆತೂರು ಕೊಯಿಲ ಎಂಬಲ್ಲಿ ಗುರುವಾರ ತಡರಾತ್ರಿ ನಡೆದಿದೆ.
ಆತೂರು ಕೊಯಿಲ ಸಮೀಪದ ಕಲಾಯಿ ನಿವಾಸಿ ಯಾಕುಬ್ ಎಂಬವರ ಮನೆಯಲ್ಲಿ ಕಳ್ಳತವಾಗಿದ್ದು, ಮನೆ ಮಂದಿ ಕಾರ್ಯಕ್ರಮವೊಂದಕ್ಕೆ ತೆರಳಿದ್ದ ವೇಳೆ ಘಟನೆ ನಡೆದಿದೆ. ಇನ್ನೊಂದು ಮನೆಯ ಬೀಗ ಮುರಿಯುವ ವೇಳೆ ಆಟೋ ರಿಕ್ಷಾ ಬರುತ್ತಿರುವುದನ್ನು ನೋಡಿದ ಕಳ್ಳರು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಕಡಬ ಠಾಣಾ ಪೊಲೀಸರು, ಶ್ವಾನ ದಳ ಹಾಗೂ ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.