ಕಡಬ, ನ.14: ಹಣ್ಣುಹಂಪಲು ಸಾಗಾಟದ ಪಿಕಪ್ ವಾಹನ ಹಾಗೂ ಕಾರೊಂದರ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟು, ಇನ್ನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಆಲಂಕಾರು ಸಮೀಪದ ನೆಕ್ಕರೆ ಎಂಬಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.

ಇಂದು ಬೆಳಗ್ಗೆ ಮಂಗಳೂರಿನಿಂದ ಕಡಬದ ಕಳಾರಕ್ಕೆ ಹಣ್ಣು ಹಂಪಲು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನ ಮತ್ತು ವಿರುದ್ಧ ದಿಕ್ಕಿನಿಂದ ಬಂದ ಕಾರು ನಡುವೆ ಢಿಕ್ಕಿ ಸಂಭವಿಸಿದೆ.ಇದರಿಂದ ಪಿಕಪ್ ನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಓರ್ವ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಕೊನೆಯುಸಿರೆಳೆದಿರುವುದಾಗಿ ತಿಳಿದುಬಂದಿದೆ.

ಮೃತಪಟ್ಟವರ ಮತ್ತು ಗಾಯಾಳುಗಳ ವಿವರ ಇನ್ನಷ್ಟೇ ತಿಳಿದು ಬರಬೇಕಿದೆ.

ಸ್ಥಳಕ್ಕೆ ಕಡಬ ಪೊಲೀಸರು ಧಾವಿಸಿದ್ದಾರೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor