×
Ad

ಕೇರಳದಲ್ಲಿ ರೈಲಿನಿಂದ ಬಿದ್ದು ಕಡಬದ ಯುವಕ ಸಾವು

Update: 2023-10-20 14:59 IST

ಕಡಬ, ಅ.20. ಕಡಬದ ಯುವಕನೊಬ್ಬ ರೈಲಿನಿಂದ ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ಶುಕ್ರವಾರ ಬೆಳಿಗ್ಗೆ ಕೇರಳದ‌ ಕಣ್ಣೂರಿನಲ್ಲಿ ನಡೆದಿದೆ.

ಮೃತ ಯುವಕನನ್ನು ಕಡಬ ತಾಲೂಕಿನ ಮರ್ದಾಳ ಬಂಟ್ರ ಗ್ರಾಮದ ನೀರಾಜೆ ನಿವಾಸಿ ಸುರೇಶ ಎಂದು ಗುರುತಿಸಲಾಗಿದೆ.

ಕೇರಳದಲ್ಲಿ ಟಿಂಬರ್ ಕೆಲಸ ಮಾಡುತ್ತಿದ್ದ ಇವರು ಚೌತಿ ಹಬ್ಬದ ಹಿನ್ನೆಲೆಯಲ್ಲಿ ವಾರದ ಹಿಂದೆಯಷ್ಟೇ ಮನೆಗೆ ಬಂದು ಮತ್ತೆ ಕೆಲಸಕ್ಕೆಂದು ತೆರಳಿದ್ದರು. ಗುರುವಾರ ರಾತ್ರಿ ಕರೆ ಮಾಡಿ ರೈಲಿನಲ್ಲಿ ಊರಿಗೆ ಬರುತ್ತಿರುವುದಾಗಿ ತಿಳಿಸಿದ್ದು, ಇಂದು ಮುಂಜಾನೆ 8 ಗಂಟೆ ಸುಮಾರಿಗೆ ಅವರ ಮೊಬೈಲ್ ನಂಬರ್ ಗೆ ಮನೆಯಿಂದ ಕರೆ ಮಾಡಿದ ವೇಳೆ ಆಸ್ಪತ್ರೆಯ ಸಿಬ್ಬಂದಿ ಕರೆ ಸ್ವೀಕರಿಸಿ ಮೃತಪಟ್ಟ ವಿಚಾರವನ್ನು ತಿಳಿಸಿರುವುದಾಗಿ ತಿಳಿದುಬಂದಿದೆ.

ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಮನೆ ಮಂದಿ ಕಣ್ಣೂರಿಗೆ ತೆರಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News