×
Ad

ಕಾಪು | ಪತಿಗೆ ಮೆಣಸಿನ ಹುಡಿ ಮಿಶ್ರಿತ ಬಿಸಿ ನೀರು ಎರಚಿದ ಪತ್ನಿ: ದೂರು

Update: 2023-09-19 13:37 IST

ಕಾಪು, ಸೆ.19: ಕಟಪಾಡಿ ಸಮೀಪದ ಮಣಿಪುರ ಗ್ರಾಮದ ಗುಜ್ಜಿ ಎಂಬಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಪತ್ನಿ ತನ್ನ ಪತಿಯ ಮೈಮೇಲೆ ಮೆಣಸಿನ ಹುಡಿ ಮಿಶ್ರಿತ ಬಿಸಿ ನೀರು ಎರಚಿ ಗಾಯಗೊಳಿಸಿರುವ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಾ ಮಡ್ಮಣ್ ನಿವಾಸಿ ಮುಹಮ್ಮದ್ ಆಸಿಫ್ ಗಾಯಗೊಂಡವರು. ಇವರ ಪತ್ನಿ ಮಣಿಪುರ ಗ್ರಾಮದ ಗುಜ್ಜಿ ನಿವಾಸಿ ಹುಸೈನ್ ಎಂಬವರ ಪುತ್ರಿ ಅಫ್ರೀನ್ ಕೃತ್ಯ ಎಸಗಿದ ಆರೋಪಿಯಾಗಿದ್ದಾರೆ.

ಘಟನೆಯಲ್ಲಿ ಮುಖ, ದೇಹ, ಎಡಗೈ, ಎದೆ, ಬೆನ್ನು ಬಲಕೈ ಸುಟ್ಟು ಹೋಗಿ ಗಂಭೀರವಾಗಿ ಗಾಯಗೊಂಡಿರುವ ಆಸಿಫ್ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆಸಿಫ್ ಬೇರೆ ಹುಡುಗಿಯೊಂದಿಗೆ ಸಂಬಂಧ ಹೊಂದಿರುವುದಾಗಿ ಅನುಮಾನ ಹೊಂದಿದ್ದ ಅಫ್ರೀನ್, ಈ ಬಗ್ಗೆ ಆಗಾಗ್ಗೆ ಜಗಳವಾಡುತ್ತಿದ್ದಳೆನ್ನಲಾಗಿದೆ. ಸೆ.17ರಂದು ಸಂಜೆ ಆಸಿಫ್ ಬಾತ್ ರೂಮಿನಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಅಫ್ರೀನ್ ಹೊರಗಿನಿಂದ ಬಾಗಿಲು ಬಡಿದಿದ್ದು, ಆಸಿಫ್ ಬಾಗಿಲು ತೆರೆದಾಗ ಮೆಣಸಿನ ಹುಡಿ ಮಿಶ್ರಿತ ಬಿಸಿ ನೀರನ್ನು ಮೈ ಮೇಲೆ ಎರಚಿದ್ದಾಗಿ ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News