×
Ad

ಕಾವೂರು: ಕಾರು ಢಿಕ್ಕಿ; ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು

Update: 2025-09-22 19:33 IST

ಕಾವೂರು: ಕಾರೊಂದು ಹಿಟ್ ಆ್ಯಂಡ್ ರನ್ ಗೆ ವಿದ್ಯಾರ್ಥಿಯೋರ್ವ ಬಲಿಯಾದ ಘಟನೆ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೋಂದೆಲ್ ಬಳಿ ಸೋಮವಾರ ಬೆಳಗ್ಗೆ ವರದಿಯಾಗಿದೆ.

ಮೃತರನ್ನು ಬಜ್ಪೆ ಜರಿ‌ನಗರ‌ ನಿವಾಸಿ ಅಹ್ಮದ್ ಬಾವ ಎಂಬವರ‌ ಪುತ್ರ ಪಿಎ ಕಾಲೇಜಿನಲ್ಲಿ ಮೂರನೇ ವರ್ಷದ ಬ್ಯಾಚುಲರ್‌ ಆಫ್ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದ ಫಹದ್ ಅಹ್ಮದ್ (22) ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಫಹದ್ ಬೆಳಗ್ಗೆ 8 ಗಂಟೆಯ ಸುಮಾರಿಗೆ ಬಜ್ಪೆಯಿಂದ ತನ್ನ ಬೈಕ್‌ನಲ್ಲಿ ಕಾಲೇಜಿಗೆ ತೆರಳುತ್ತಿದ್ದ ವೇಳೆ ಹಿಂದಿನಿಂದ ಬರುತ್ತಿದ್ದ ಸ್ವಿಫ್ಟ್ ಕಾರೊಂದು ಡಿಕ್ಕಿ ಹೊಡೆದು ಪರಾರಿಯಾಗಿದೆ. ಇದರಿಂದ ನಿಯಂತ್ರಣ ಕಳೆದುಕೊಂಡ ಅವರ ಬೈಕ್ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆಯಿತೆನ್ನಲಾಗಿದೆ. ಘಟನೆಯಿಂದ ಫಹದ್ ಸ್ಥಳದಲ್ಲೇ‌ ಮೃತಪಟ್ಟರೆಂದು ತಿಳಿದು ಬಂದಿದೆ.

ಘಟನೆಯ ಮಾಹಿತಿ ತಿಳಿಯಿತ್ತಲೇ ಸ್ಥಳಕ್ಕೆ ಬಂದ ಮಂಗಳೂರು ಉತ್ತರ ಸಂಚಾರ ಪೊಲೀಸರು ಸ್ಥಳ ಪರಿಶೀಲನೆ‌ ನಡೆಸಿ ಪ್ರತ್ಯಕ್ಷ ದರ್ಶಿಗಳು ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ಸಂಗ್ರಹಿಸಿ ಹಿಟ್ ಆ್ಯಂಡ್ ನಡೆಸಿ ಪರಾರಿಯಾಗಿದ್ದ ಕಾರನ್ನು ಕೇರಳದ ಕುಂಪಳದಲ್ಲಿ ಪತ್ತೆಹಚ್ಚಿ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಈ ಸಂಬಂಧ ಪ್ರಕರರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News