×
Ad

ಕೋಡಿಂಬಾಳ: ನಿವೃತ್ತ ರೈಲ್ವೆ ಉದ್ಯೋಗಿ ಆತ್ಮಹತ್ಯೆ

Update: 2024-01-17 13:15 IST

ಕಡಬ: ನಿವೃತ್ತ ರೈಲ್ವೇ ಉದ್ಯೋಗಿಯೊಬ್ಬರ ಮೃತದೇಹ ಕೋಡಿಂಬಾಳ ರೈಲ್ವೇ ಹಳಿಯ ಸಮೀಪದ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮೃತರನ್ನು ಕೋಡಿಂಬಾಳ ಗ್ರಾಮದ ಗುಂಡಿಮಜಲು ನಿವಾಸಿ ಮಾಧವ ರೈ(62) ಎಂದು ಗುರುತಿಸಲಾಗಿದೆ. ಅವರ ಮೃತದೇಹ ಕೋಡಿಂಬಾಳದ ರೈಲು ಮಾರ್ಗದ ಸಮೀಪ ಗೇರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಮಂಗಳವಾರ ರಾತ್ರಿ ಪತ್ತೆಯಾಗಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತರು ಪತ್ನಿ ಹಾಗೂ 6 ಮಂದಿ ಮಕ್ಕಳನ್ನು ಅಗಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News