ಕುಡುಪು ಹತ್ಯೆ ಪ್ರಕರಣ: ವಿಶೇಷ ಸರಕಾರಿ ಅಭಿಯೋಜಕರ ನೇಮಕ
Update: 2025-07-25 14:34 IST
ಮಂಗಳೂರು: ನಗರ ಹೊರವಲಯದ ಕುಡುಪುವಿನಲ್ಲಿ ಎ.27ರಂದು ನಡೆದ ಕೇರಳ ವಯನಾಡಿನ ಅಶ್ರಫ್ ಗುಂಪು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ವಿಶೇಷ ಅಭಿಯೋಜಕರಾಗಿ ಶಿವಪ್ರಸಾದ್ ಆಳ್ವ ಅವರನ್ನು ನೇಮಿಸಿದೆ.
ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಸರಕಾರದ ಪರವಾಗಿ ವಾದಿಸಲು ಶಿವಪ್ರಸಾದ್ ಆಳ್ವ ನೇಮಕಗೊಳಿಸಲಾಗಿದೆ.