×
Ad

ಕುತ್ತಾರು: ಮನೆಯ ಗೋಡೆ ಕುಸಿದು ಇಬ್ಬರು ಮಕ್ಕಳ ಸಹಿತ ದಂಪತಿ ಮೃತ್ಯು

Update: 2024-06-26 08:27 IST

ಉಳ್ಳಾಲ: ಆವರಣ ಗೋಡೆ (ಕಂಪೌಂಡ್‌) ಕುಸಿದು ಮನೆಯ ಮೇಲೆ ಬಿದ್ದ ಪರಿಣಾಮ ಇಬ್ಬರು ಮಕ್ಕಳ ಸಹಿತ ದಂಪತಿ ಮೃತಪಟ್ಟ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನೂರು ಗ್ರಾಮದ ಕುತ್ತಾರು ಮದನಿ ನಗರ ಎಂಬಲ್ಲಿ ನಡೆದಿರುವ ಬಗ್ಗೆ ಬುಧವಾರ ವರದಿಯಾಗಿದೆ.

ಮೃತರನ್ನು ಯಾಸಿರ್(45),ಅವರ ಪತ್ನಿ ಮರಿಯಮ್ಮ(40) ಮಕ್ಕಳಾದ ರಿಯಾನ ಮತ್ತು ರಿಫಾನ ಎಂದು ಗುರುತಿಸಲಾಗಿದೆ.

ಅಬೂಬಕ್ಕರ್ ಎಂಬವರ ಮನೆಯ ಆವರಣ ಗೋಡೆ ಕುಸಿದು ಯಾಸಿರ್ ಅವರ ಮನೆಯ ಗೋಡೆ ಮೇಲೆ ಬಿದ್ದು  ದುರಂತ ಸಂಭವಿಸಿದೆ. ಮನೆಯ ಅವಶೇಷಗಳ ಅಡಿಯಿಂದ ಮೂವರ ಮೃತದೇಹಗಳನ್ನು ಸ್ಥಳೀಯರು ಹೊರತೆಗೆದಿದ್ದಾರೆ. ಬಾಲಕಿಯೊಬ್ಬಳ ಮೃತದೇಹಕ್ಕಾಗಿ ಕಾರ್ಯಾಚರಣೆ ಮುಂದುವರಿದಿದೆ. 

ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿದ್ದು, ತಲಾ ಐದು ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ ಎಂದು ತಿಳಿದು ಬಂದಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News