ಕನ್ಯಾನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ ನಿವಾರಿಸುವಂತೆ ಆಗ್ರಹಿಸಿ ಶಾಸಕರಿಗೆ ಮನವಿ
ಕನ್ಯಾನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳ ಕೊರತೆಯನ್ನು ತುರ್ತಾಗಿ ನಿವಾರಿಸುವಂತೆ ಆಗ್ರಹಿಸಿ ಪ್ರವಾಸಿ ಕೂಟ ವಿಟ್ಲ (ರಿ.) ನಿಯೋಗದಿಂದ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕರಾದ ರಾಜೇಶ್ ನಾಯ್ಕ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.
ಮನವಿಯನ್ನು ಸ್ವೀಕರಿಸಿದ ಶಾಸಕರು, ಸಂಬಂಧಿತ ಇಲಾಖೆಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ರಾಜ್ಯ ಸರ್ಕಾರದ ಮಟ್ಟದಲ್ಲಿಯೂ ಅಗತ್ಯ ಕ್ರಮಗಳನ್ನು ಕೈಗೊಂಡು ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವುದಾಗಿ ಭರವಸೆ ನೀಡಿದರು.
ಮುಂದಿನ ದಿನಗಳಲ್ಲಿ ಸಮಸ್ಯೆಗಳ ಸಮಗ್ರ ಚರ್ಚೆಗಾಗಿ ಸರಕಾರಿ ಅಧಿಕಾರಿಗಳ ಜೊತೆ ಪ್ರವಾಸಿ ಕೂಟದ ಪ್ರತಿನಿಧಿಗಳು ಭಾಗವಹಿಸಲು ಆಹ್ವಾನ ನೀಡಿದರು.
ಈ ಸಂದರ್ಭದಲ್ಲಿ ಪ್ರವಾಸಿ ಕೂಟ ವಿಟ್ಲ (ರಿ) ಅಧ್ಯಕ್ಷ ಮೊಹಮ್ಮದ್ ಮಸೂದ್ ವಿಟ್ಲ, ಉಪಾಧ್ಯಕ್ಷರಾದ ಶಾಫಿ ಬಹರೈನ್ ಮತ್ತು ಅಬ್ದುಲ್ ಅಝೀಝ್ (KSA), ಪ್ರಧಾನ ಕಾರ್ಯದರ್ಶಿ ತವಾಜ್ ಖತರ್, ಜೊತೆ ಕಾರ್ಯದರ್ಶಿಗಳಾದ ಆಶಿಫ್ ಬಹರೈನ್ ಹಾಗೂ ಯೂನೂಸ್ ಅಬುಧಾಬಿ, ಮಾಧ್ಯಮ ವಿಭಾಗದ ನವಾಝ್ ಕಡಂಬು (UAE) ಹಾಗೂ ಹಮೀದ್ ಬ್ಯಾರಿ ಒಕ್ಕೆತ್ತೂರು (KSA ) ಉಪಸ್ಥಿತರಿದ್ದರು.