×
Ad

ನ್ಯಾಯವಾದಿ ನೌಶಾದ್ ಕಾಶಿಂಜಿ ಕೊಲೆ ಸಹಿತ ಹಲವು ಪ್ರಕರಣದಲ್ಲಿ ಭಾಗಿ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Update: 2025-11-25 19:47 IST

ಟಿ.ದಿನೇಶ್ ಶೆಟ್ಟಿ

ಮಂಗಳೂರು, ನ.25: ನ್ಯಾಯವಾದಿ ನೌಶಾದ್ ಕಾಶಿಂಜಿ ಕೊಲೆ ಸಹಿತ ಹಲವು ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡ ಆರೋಪಿ ಬೆಳ್ತಂಗಡಿ ತಾಲೂಕಿನ ಹೊಸಮನೆಯ ನಿವಾಸಿ ಟಿ.ದಿನೇಶ್ ಶೆಟ್ಟಿ ಯಾನೆ ದಿನ್ನು ಎಂಬಾತನನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ.

ಭೂಗತ ಲೋಕದ ಪಾತಕಿ ರವಿ ಪೂಜಾರಿ ಮತ್ತು ಕಲಿ ಯೊಗೀಶ್‌ ನಿಂದ ಸುಪಾರಿ ಪಡೆದು ನ್ಯಾಯವಾದಿ ನೌಶಾದ್ ಖಾಶಿಂಜಿ ಅವರನ್ನು 2009ರಲ್ಲಿ ಕೊಲೆಗೈದ ಆರೋಪದಲ್ಲಿ ದಿನೇಶ್ ಶೆಟ್ಟಿಗೆ ಜೀವಾವಧಿ ಶಿಕ್ಷೆಯಾಗಿತ್ತು. ಆ ಪ್ರಕರಣದಲ್ಲಿ 11 ವರ್ಷ ಕಾರಾಗೃಹ ಶಿಕ್ಷೆ ಅನುಭವಿಸಿದ್ದ ಈತ ರಾಜ್ಯ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿ 2019ರಲ್ಲಿ ಬಿಡುಗಡೆಗೊಂಡಿದ್ದ.

ನಂತರದ ದಿನಗಳಲ್ಲಿ ಕಾವೂರು ಠಾಣಾ ವ್ಯಾಪ್ತಿಯಲ್ಲಿ ನಡೆದ ಅಪಹರಣ, ಮಂಗಳೂರು ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ವಂಚನೆ ಮತ್ತು ಸುಲಿಗೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ.

ಕಳೆದ ಒಂದೂವರೆ ವರ್ಷದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ದಿನೇಶ್‌ನನ್ನು ಮಂಗಳವಾರ ಬಂಧಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News