×
Ad

ಬೆಳ್ತಂಗಡಿ: ಸವಣಾಲಿನಲ್ಲಿ ಆತಂಕ ಮೂಡಿಸಿದ್ದ ಚಿರತೆ ಸೆರೆ

Update: 2024-09-01 14:08 IST

ಬೆಳ್ತಂಗಡಿ: ಸವಣಾಲು ಬಳಿ ಚಿರತೆಯೊಂದು ಬೋನಿಗೆ ಬಿದ್ದ ಘಟನೆ ರವಿವಾರ ವರದಿಯಾಗಿದೆ.

ಸವಣಾಲು ಗ್ರಾಮದಲ್ಲಿ ಕಳೆದ ಎರಡು ತಿಂಗಳ ಹಿಂದೆ ಚಿರತೆಯೊಂದು ಕಾಣಿಸಿದ್ದು, ಸ್ಥಳೀಯರಿಗೆ ಆತಂಕ ಎದುರಾಗಿತ್ತು. ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದಾಗ ಅರಣ್ಯ ಇಲಾಖೆಯ ಅಧಿಕಾರಿಗಳು ಪರಿಶೀಲಿಸಿ ಗುರಿಕಂಡ ಆನಂದ ಶೆಟ್ಟಿ ಎಂಬವರ ಮನೆಯ ಬಳಿ ಎರಡು ತಿಂಗಳ ಹಿಂದೆ ಚಿರತೆ ಹಿಡಿಯಲು ಬೋನ್ ಅಳವಡಿಸಿ ಅದರಲ್ಲಿ ಕೋಳಿ ಇಡಲಾಗಿತ್ತು. ಕೊನೆಗೂ ಕಳೆದ ಮಧ್ಯರಾತ್ರಿ ಚಿರತೆ ಕೋಳಿ ಹಿಡಿಯಲು ಬೋನಿನೊಳಗೆ ಹೋಗಿ ಸೆರೆಯಾಗಿದೆ.

ಈಗಾಗಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದ್ದು, ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ಚಿರತೆ ಸೆರೆಯಾಗಿರುವುದರಿಂದ ಸ್ಥಳೀಯರ ಆತಂಕ ದೂರವಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News