×
Ad

ಮಡಂತ್ಯಾರ್: ಗಾಂಜಾ ಸೇವಿಸಿ‌ ಅಸಭ್ಯ ವರ್ತನೆ; ಆರೋಪಿ ಬಂಧನ

Update: 2025-11-05 10:32 IST

ಬೆಳ್ತಂಗಡಿ: ಗಾಂಜಾ ಸೇವಿಸಿ ಮಡಂತ್ಯಾರು ಪೇಟೆಯಲ್ಲಿ ನ.2 ರಂದು ಬೆಳಗ್ಗೆ 10:45ರ ಹೊತ್ತಿಗೆ ಅಸಭ್ಯ ರೀತಿಯಲ್ಲಿ ವರ್ತಿಸಿದ ವ್ಯಕ್ತಿಯ‌ನ್ನು ಪೂಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ರಕ್ತೇಶ್ವರಿ ಪದವು ನಿವಾಸಿ  ಸಂಕೇತ್ (28) ಎಂದು ಗುರುತಿಸಲಾಗಿದೆ. ಈತನನ್ನು ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ವೈದ್ಯಕೀಯ ಪರೀಕ್ಷೆ ನಡೆಸಿದಾಗ ನಿಷೇಧಿತ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ‌ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News