×
Ad

ಮದ್ದಡ್ಕ: ಅಕ್ರಮ ಗೋ ಸಾಗಾಟ; ಇಬ್ಬರ ಬಂಧನ

Update: 2024-10-19 11:34 IST

ಬೆಳ್ತಂಗಡಿ: ಸಮರ್ಪಕವಾದ ದಾಖಲೆಗಳಿಲ್ಲದೆ ಅಕ್ರಮವಾಗಿ ಪಿಕಪ್ ವಾಹನದಲ್ಲಿ ದನ‌ ಸಾಗಾಟವನ್ನು ಪತ್ತೆಹಚ್ಚಿದ್ದು ಚಾಲಕ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದು ದನಗಳನ್ನು ಹಾಗೂ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.

 ಕೊಟ್ಟಿಗೆಹಾರ ನಿವಾಸಿಗಳಾದ ಅಶ್ವಥ್ (34)ಹಾಗೂ ಸಚಿನ್ (27) ಬಂಧಿತ ಆರೋಪಿಗಳು. ಯಾವುದೇ ಪರವಾನಿಗೆಯಿಲ್ಲದೇ ಗೋ ಸಾಗಾಟ ನಡೆಯುತ್ತಿರುವ ಬಗ್ಗೆ ಬಂದ ಮಾಹಿತಿಯ ಹಿನ್ನೆಲೆಯಲ್ಲಿ ಬೆಳ್ತಂಗಡಿ ಪೊಲೀಸರು ಶುಕ್ರವಾರ ರಾತ್ರಿ  ವೇಳೆ ಮದ್ದಡ್ಕದಲ್ಲಿ ಪರಿಶೀಲನೆ ಮಡೆಸಿದಾಗ ಅಕ್ರಮ ಗೋ ಸಾಗಾಟ ಬೆಳಕಿಗೆ ಬಂದಿದೆ.

ಗೂಡ್ಸ್ ವಾಹನದಲ್ಲಿ ಎರಡು ದನಗಳು, ಒಂದು ಕರು, ಹಾಗೂ ಒಂದು ಹೋರಿಯನ್ನು ಹಿಂಸಾತ್ಮಕವಾಗಿ ಸಗಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ.

ಆರೋಪಿಗಳ ಬಳಿ ಯಾವುದೇ ಸೂಕ್ತ ದಾಖಲೆಗಳು ಇಲ್ಲದ ಹಿನ್ನೆಲೆಯಲ್ಲಿ ಆರೋಪಿಗಳನ್ನು ಬಂಧಿಸಿದ ಪೊಲೀಸರು ದನಗಳನ್ನು ಹಾಗೂ ವಾಹನವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News