×
Ad

ಮದ್ರಸ ಪಬ್ಲಿಕ್ ಪರೀಕ್ಷೆ: ಕುಡುಪಾಡಿ ಹಯಾತುಲ್ ಇಸ್ಲಾಮ್ ಮದ್ರಸಕ್ಕೆ 100 ಶೇ. ಫಲಿತಾಂಶ

Update: 2026-03-05 17:15 IST

ಮಂಗಳೂರು: ಸಮಸ್ತ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ ಬೋರ್ಡ್ ನಡೆಸಿದ 2025-26ನೇ ಸಾಲಿನ ಐದು ಮತ್ತು ಏಳನೇ ತರಗತಿಯ ಮದ್ರಸ ಪಬ್ಲಿಕ್ ಪರೀಕ್ಷೆಯಲ್ಲಿ ಜೆಪ್ಪು ಕುಡ್ಪಾಡಿಯ ಬದ್ರಿಯ ಜುಮಾ ಮಸೀದಿ ಅಧೀನದ ಹಯಾತುಲ್ ಇಸ್ಲಾಮ್ ಮದ್ರಸವು 100 ಶೇ. ಫಲಿತಾಂಶ ದಾಖಲಿಸಿದೆ.

5ನೇ ತರಗತಿಯಲ್ಲಿ ಪರೀಕ್ಷೆ ಬರೆದ ಒಟ್ಟು 24 ವಿದ್ಯಾರ್ಥಿಗಳ ಪೈಕಿ 10 ಮಂದಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದರೆ, 10 ಮಂದಿ ಪ್ರಥಮ ದರ್ಜೆ, ಓರ್ವ ದ್ವಿತೀಯ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾನೆ.

ಅದೇ ರೀತಿ 7ನೇ ತರಗತಿಯಲ್ಲಿ ಪರೀಕ್ಷೆ ಬರೆದ ಒಟ್ಟು 14 ವಿದ್ಯಾರ್ಥಿಗಳ ಪೈಕಿ ಓರ್ವ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದರೆ, ಒಂಭತ್ತು ಮಂದಿ ಪ್ರಥಮ ದರ್ಜೆ, ನಾಲ್ವರು ದ್ವಿತೀಯ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News