×
Ad

ಮಂಗಳೂರು ಪೊಲೀಸ್ ಆಯುಕ್ತರ ಹೆಸರಲ್ಲಿ Whatsapp ಮೆಸೇಜ್ ಮಾಡಿ ತುರ್ತು ಹಣದ ಬೇಡಿಕೆ!

Update: 2023-10-27 11:30 IST

ಮಂಗಳೂರು, ಅ.27: ಮಂಗಳೂರು ನಗರ ಪೊಲೀಸ್ ಆಯುಕ್ತರ ಹೆಸರಿನಲ್ಲಿ ನಕಲಿ Whatsapp ನಂಬರ್ ಮೂಲಕ ಮೆಸೇಜ್ ಮಾಡಿ ತುರ್ತು ಹಣಕ್ಕೆ ಬೇಡಿಕೆ ಇಟ್ಟಿರುವ ಪ್ರಕರಣ ಬೆಳಕಿಗೆ ಬಂದಿದೆ.

ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಅವರ ವಾಟ್ಸ್ ಆ್ಯಪ್ ಪ್ರೊಫೈಲ್ ಪೊಟೋ ಬಳಸಿರುವ whatsapp ನಂಬರ್ ನಿಂದ ಮೆಸೇಜ್ ಮಾಡಿರುವ ಕಿಡಿಗೇಡಿ, ತನ್ನನ್ನು ಪೊಲೀಸ್ ಆಯುಕ್ತನೆಂದು ಪರಿಚಯಿಸಿಕೊಂಡು ತುರ್ತು ಹಣದ ಬೇಡಿಕೆ ಮುಂದಿಟ್ಟಿದ್ದಾನೆ. ಈ ರೀತಿ ಪೊಲೀಸ್ ಅಧಿಕಾರಿಗಳು ಸೇರಿದಂತೆ ಆಯುಕ್ತರ ಹಲವು ಮಂದಿ ಪರಿಚಿತರಿಗೆ ಸಂದೇಶ ಕಳುಹಿಸಿದ್ದಾನೆ ಎಂದು ತಿಳಿದುಬಂದಿದೆ.

“ನಾನು ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್. ನಾನು ಆಸ್ಪತ್ರೆಗೆ ದಾಖಲಾಗಿದ್ದು, ತುರ್ತು ಹಣ ಬೇಕಾಗಿದೆ. ನನ್ನ UPI ಕಾರ್ಯನಿರ್ವಹಿಸುತ್ತಿಲ್ಲ. ಅರ್ಜೆಂಟಾಗಿ ಹಣ ಟ್ರಾನ್ಸ್ ಫರ್ ಮಾಡಿ. ಒಂದು ತಾಸಿನೊಳಗೆ ವಾಪಸ್ ಮಾಡುತ್ತೇನೆ” ಎಂದು ಮೆಸೇಜ್ ನಲ್ಲಿ ಉಲ್ಲೇಖಿಸಿದ್ದಾನೆ. ಮೆಸೇಜ್ ಬೆನ್ನಲ್ಲೇ Whatsapp ಮೂಲಕ ಮಿಸ್ ಕಾಲ್ ಕೂಡ ಮಾಡಿದ್ದಾನೆ.

ಈ ಕುರಿತು ಮಂಗಳೂರು ಪೊಲೀಸ್ ಆಯುಕ್ತರು ಸ್ಪಷ್ಟನೆ ನೀಡಿದ್ದು, ಇದೊಂದು ನಕಲಿ ಮೆಸೇಜ್ ಕರೆಯಾಗಿದೆ. ಯಾರು ಕೂಡ ಸ್ಪಂದಿಸಬಾರದು ಎಂದು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News