×
Ad

ಮಂಗಳೂರು | ಅಖಿಲ ಭಾರತ ಬಿಲ್ಲವರ ಯೂನಿಯನ್ ವತಿಯಿಂದ ʼಜಾಗತಿಕ ಬಿಲ್ಲವರ ಕ್ರೀಡೋತ್ಸವ-2026ʼ

Update: 2025-11-12 09:28 IST

ಬಂಟ್ವಾಳ : ಅಖಿಲ ಭಾರತ ಬಿಲ್ಲವರ ಯೂನಿಯನ್ ವತಿಯಿಂದ ಜಾಗತಿಕ ಬಿಲ್ಲವರ ಕ್ರೀಡೋತ್ಸವ-2026 ಕಾರ್ಯಕ್ರಮ ಮಂಗಳೂರಿನ ನೆಹರು ಮೈದಾನದಲ್ಲಿ ನ.18 ರಂದು ನಡೆಯಲಿದೆ ಎಂದು ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದರು.

ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾಗತಿಕ ಮಟ್ಟದ ಬಿಲ್ಲವರ ಕ್ರೀಡಾಕೂಟ ಇದೇ ಮೊದಲನೆಯದಾಗಿದ್ದು, ಕಾರ್ಯಕ್ರಮದ ಲೋಗೋವನ್ನು ಚಲನಚಿತ್ರ ನಟರು ಈಗಾಗಲೇ ಬಿಡುಗಡೆ ಮಾಡಿದ್ದಾರೆ. ಈ ಕ್ರೀಡಾಕೂಟದಲ್ಲಿ ಬಿಲ್ಲವ ಸಮುದಾಯದ ಎಲ್ಲಾ ಪಂಗಡಗಳು ಭಾಗವಹಿಸಲು ಅವಕಾಶ ಇದ್ದು, ಕ್ರೀಡಾಕೂಟದ ಸದುಪಯೋಗ ಪಡೆದುಕೊಂಡು ಕಾರ್ಯಕ್ರಮ ಯಶಸ್ವಿಯಾಗಲು ಸಹಕಾರ ನೀಡುವಂತೆ ಅವರು ತಿಳಿಸಿದರು.

ಕ್ರೀಡೆಯಲ್ಲಿ ಭಾಗವಹಿಸುವವರು ಕ್ರೀಡಾ ಕೂಟದ ನಿಯಮ ಹಾಗೂ ನಿಬಂಧನೆಗಳಿಗೆ ಬದ್ದರಾಗಿರಬೇಕು, ಕಾರ್ಯಕ್ರಮದಲ್ಲಿ ಭಾಗವಹಿಸುವರಿಗೆ ಉಪಹಾರ ಹಾಗೂ ಊಟದ ವ್ಯವಸ್ಥೆ ಮಾಡಲಾಗಿದೆ, ಪುರುಷ ಹಾಗೂ ಮಹಿಳಾ ವಿಭಾಗದಲ್ಲಿ ಕೀಡಾಕೂಟ ನಡೆಯಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ರಾಷ್ಟ್ರೀಯ ಬಿಲ್ಲವ ಮಹಾಮಂಡಲದ ಕೋಶಾಧಿಕಾರಿ ಬೇಬಿ ಕುಂದರ್, ಅಖಿಲ ಭಾರತ ಬಿಲ್ಲವ ಮಹಾ ಮಂಡಲದ ಪ್ರಧಾನ ಕಾರ್ಯದರ್ಶಿ ಜೀವನ್ ಕುಮಾರ್ ತೊಕ್ಕೊಟ್ಟು, ಕ್ರೀಡಾಕೂಟ ಸಂಚಾಲಕ ಸದಾನಂದ ಪೂಜಾರಿ, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ, ಉಪಾಧ್ಯಕ್ಷ ಜಯಪ್ರಕಾಶ್ ಜೆ.ಎಸ್, ಮಾಜಿ ಅಧ್ಯಕ್ಷ ನ್ಯಾಯವಾದಿ ಚಂದ್ರಶೇಖರ ಪೂಜಾರಿ, ಯುವವಾಹಿನಿ ಮಾಜಿ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News