ಮಂಗಳೂರು: ಸಂತ ಜೆರೋಸಾ ಶಾಲೆಯ ಮುಂಭಾಗ ಪ್ರತಿಭಟನೆ ನಡೆಸಿದ ಪ್ರಕರಣ; ಶಾಸಕರಿಗೆ ನಿರೀಕ್ಷಣಾ ಜಾಮೀನು
Update: 2024-02-20 12:13 IST
Photo: fb.com/vedavyasbjp
ಮಂಗಳೂರು: ಸಂತ ಜೆರೋಸಾ ಶಾಲೆಯ ಮುಂಭಾಗ ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಶಾಸಕ ವೇದವ್ಯಾಸ ಕಾಮತ್, ಭರತ್ ಶೆಟ್ಟಿ ಹಾಗೂ ಇತರರ ವಿರುದ್ಧ ದಾಖಲಿಸಲಾಗಿದ್ದ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಮಂಜೂರು ಆಗಿದೆ.
ಜೆರಾಲ್ಡ್ ಲೋಬೋ ಎಂಬವರು ನೀಡಿದ್ದ ದೂರಿನನ್ವಯ ಶಾಸಕರ ಸಹಿತ ಹಲವರ ವಿರುದ್ಧ ಮಂಗಳೂರು ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು.
ಬೆಂಗಳೂರಿನ ವಿಶೇಷ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಮಂಜೂರು ಆಗಿದ್ದು, ಶಾಸಕರು ಹಾಗೂ ವಿಹಿಂಪ ಮುಖಂಡ ಶರಣ್ ಪಂಪ್ವೆಲ್, ಕಾರ್ಪೊರೇಟರ್ಗಳಾದ ಸಂದೀಪ್ ಹಾಗೂ ಭರತ್ ಕುಮಾರ್ ವಿರುದ್ಧವೂ ಪ್ರಕರಣ ದಾಖಲಾಗಿತ್ತು.