×
Ad

ಮಂಗಳೂರು: ಕಾರು ಢಿಕ್ಕಿ; ಬೈಕ್‌ ಸಹಸವಾರ ತಂದೆ ಮೃತ್ಯು, ಮಗನಿಗೆ ಗಂಭೀರ ಗಾಯ

Update: 2023-08-12 16:53 IST

ಉಳ್ಳಾಲ: ಬೈಕ್‍ಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸಹಸವಾರ ಮೃತಪಟ್ಟು ಸವಾರ ಗಂಭೀರ ಗಾಯಗೊಂಡ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಚೆಂಬುಗುಡ್ಡೆ ಬಳಿ ಶನಿವಾರ ನಡೆದಿದೆ.

ಮೃತ ವ್ಯಕ್ತಿಯನ್ನು ಅಳೇಕಲ ನಿವಾಸಿ ಅಬ್ಬಾಸ್(58) ಎಂದು ಗುರುತಿಸಲಾಗಿದೆ.

ಅವರು ಶನಿವಾರ ಬೆಳಗ್ಗೆ ಮಗ ನೌಶಾದ್ ಜತೆ ಬೈಕ್‍ನಲ್ಲಿ ದೇರಳಕಟ್ಟೆಗೆ ತೆರಳಿದ್ದರು. ಈ ಸಂದರ್ಭ ಚೆಂಬುಗುಡ್ಡೆ ಬಳಿ ಕಾರೊಂದು ಬೈಕ್‍ಗೆ ಢಿಕ್ಕಿ ಹೊಡೆದಿದೆ.

ಢಿಕ್ಕಿ ಹೊಡೆದ ರಭಸಕ್ಕೆ ಬೈಕ್‍ನಲ್ಲಿದ್ದ ಇಬ್ಬರು ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದು, ಈ ಪೈಕಿ ತಂದೆ ಅಬ್ಬಾಸ್ ಅವರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಗಂಭೀರ ಗಾಯಗೊಂಡ ನೌಶಾದ್‍ನನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News