×
Ad

ಮಂಗಳೂರು : ಕೋಟ್ಯಂತರ ರೂ. ಮೌಲ್ಯದ ಅಂಬರ್ ಗ್ರೀಸ್‌ ವಶ; ಮೂವರ ಬಂಧನ

Update: 2023-11-25 18:32 IST

ಮಂಗಳೂರು ಸಿಸಿಬಿ ಪೊಲೀಸರು ಶನಿವಾರ ನಡೆಸಿದ ಕಾರ್ಯಾಚರಣೆಯಲ್ಲಿ ಕೋಟ್ಯಾಂತರ ರೂಪಾಯಿ ಬೆಲೆಬಾಳುವ ತಿಮಿಂಗಿಲದ ವಾಂತಿ (ಅಂಬರ್ ಗ್ರೀಸ್) ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿ ಒಟ್ಟು 1,62,80,000 ರೂ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡ ಘಟನೆ ವರದಿಯಾಗಿದೆ.

ಮೂಲತ: ಚಿಕ್ಕಮಗಳೂರಿನ ಹಾಲಿ ವಿಟ್ಲದ ಪಾತಿರತೋಟ ನಿವಾಸಿ ಪ್ಯಾರೇಜಾನ್ ಯಾನೆ ಸೇಟು(37), ವಿಟ್ಲದ ಪಾತಿರತೋಟದ ಬದ್ರುದ್ದೀನ್ ಯಾನೆ ಬದ್ರು (28 ), ತಮಿಳುನಾಡು ನಾಗಪಟ್ಟಿನಂನ ರಾಜೇಶ್.ಆರ್(22) ಬಂಧಿತ ಆರೋಪಿಗಳು.

ಮಂಗಳೂರು ನಗರದ ಪಂಪ್ ವೆಲ್ ಬಳಿಯ ಇಂಡಿಯಾನ ಆಸ್ಪತ್ರೆಯ ಹತ್ತಿರ 4 ಮಂದಿ ವ್ಯಕ್ತಿಗಳು ಕಾರಿನಲ್ಲಿ ತಿಮಿಂಗಿಲದ ವಾಂತಿ(ಅಂಬರ್ ಗ್ರೀಸ್) ಎಂಬ ಬೆಲೆಬಾಳುವ ವನ್ಯ ಜೀವಿ ಉತ್ಪನ್ನವನ್ನು ಗಿರಾಕಿಗಳಿಗೆ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಮೂರು ಮಂದಿ ಆರೋಪಿಗಳನ್ನು ದಸ್ತಗಿರಿ ಮಾಡಿದ್ದು, ದಸ್ತಗಿರಿ ಮಾಡಿದ ಮೂರು ಆರೋಪಿಗಳಿಂದ 1,57,50,000 ರೂ ಮೌಲ್ಯದ 1.575 ಕೆಜಿ ತಿಮಿಂಗಿಲದ ವಾಂತಿ(ಅಂಬರ್ ಗ್ರೀಸ್), ಮೊಬೈಲ್ ಫೋನ್ -3 ಮತ್ತು 1 ಕಾರನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾರ್ಗದರ್ಶನದಂತೆ ಕಾನೂನು ಮತ್ತು ಸುವ್ಯವಸ್ಥೆಯ ಡಿಸಿಪಿ ಸಿದ್ದಾರ್ಥ ಗೋಯಲ್ ಮತ್ತು ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ಅವರ ನಿರ್ದೇಶನದಂತೆ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿ.ಎ.ಹೆಗಡೆ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು ಎಂದು ಪ್ರಕಟನೆ ತಿಳಿಸಿದೆ.






 


 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News