×
Ad

ಮಂಗಳೂರು: ಮನೆಯವರು ಖರ್ಚಿಗೆ ಹಣ ಕೊಡಲಿಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ

Update: 2023-08-03 17:49 IST

ಉಳ್ಳಾಲ: ಮನೆಯವರು ಖರ್ಚಿಗೆ ಹಣ ಕೊಡಲಿಲ್ಲವೆಂದು ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುತ್ತಾರ್ ಸುಭಾಷ್‌ ನಗರದಲ್ಲಿ ಇಂದು ಬೆಳಗ್ಗೆ ನಡೆದಿದೆ.

ಸುಭಾಷ್‌ ನಗರದ ಭಾಸ್ಕರ್ ಪೂಜಾರಿ ಎಂಬವರ ಪುತ್ರ ಸುಶಾಂತ್ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.

ಸುಶಾಂತ್ ನಗರದ ಕೆಪಿಟಿಯಲ್ಲಿ ಮೆಕ್ಯಾನಿಕಲ್ ಡಿಪ್ಲೊಮಾ ಮಾಡುವ ಆಸಕ್ತಿ ವಹಿಸಿದ್ದರಿಂದ ಹೆತ್ತವರು ನಿನ್ನೆ ಸೇರಿಸಿದ್ದಾರೆ‌ . ಈ ವೇಳೆ 500 ರೂ.ಕೊಟ್ಟು ಕಾಲೇಜಿಗೆ ಕಳುಹಿಸಿದ್ದರು. ಇಂದು ಬೆಳಗ್ಗೆ ಮತ್ತೆ ಕಾಲೇಜಿಗೆ ಹೋಗುವಾಗ ಖರ್ಚಿಗೆ 500 ರೂ. ಕೊಡುವಂತೆ ಕೇಳಿದಾಗ ನೀಡಿರಲಿಲ್ಲ. ಇದರಿಂದ ಕೋಪದಲ್ಲಿ ಮನೆಯಲ್ಲೇ ಉಳಿದುಕೊಂಡ ಸುಶಾಂತ್ ತಂದೆ ಮನೆ ಹೊರಗಡೆ ಹಾಗೂ ತಾಯಿ ಅಡುಗೆ ಕೋಣೆಯಲ್ಲೇ ಇದ್ದ ಸಂದರ್ಭ ಕೋಣೆಯೊಳಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News