ಮಂಗಳೂರು, ಸೆ.17: ಕರಾವಳಿ ಭಾಗದ ದೀರ್ಘಕಾಲದ ಬೇಡಿಕೆಯಾಗಿರುವ ಮಂಗಳೂರು ಹಜ್ ಭವನ ನಿರ್ಮಾಣಕ್ಕೆ ಇಂದು ಶಿಲಾನ್ಯಾಸ ನೆರವೇರಲಿದೆ.

ಮಂಗಳೂರು ತಾಲೂಕಿನ ಬಜಪೆಯಲ್ಲಿ ಸುಮಾರು 1.55 ಎಕರೆ ವಿಸ್ತೀರ್ಣದ ಜಮೀನಿನಲ್ಲಿ ಹಜ್ ಭವನ ನಿರ್ಮಾಣವಾಗಲಿದ್ದು, ಸೆ.17ರಂದು ಸಂಜೆ 4.30ಕ್ಕೆ ಶಿಲಾನ್ಯಾಸ ಕಾರ್ಯಕ್ರಮ ನಡೆಯಲಿದೆ.

ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್, ಜಿಫ್ರಿ ಮುತ್ತುಕೋಯ ತಂಙಳ್, ಪಾಣಕ್ಕಾಡ್ ಅಬ್ದುಲ್ ನಾಸಿರ್ ಹಯ್ಯ್ ತಂಙಳ್, ಕೆ.ಎಸ್. ಆಟಕೋಯ ತಂಙಳ್, ಮಾಣಿ ಅಬ್ದುಲ್ ಹಮೀದ್ ಮುಸ್ಲಿಯಾರ್, ಕರ್ನಾಟಕ ರಾಜ್ಯ ಹಜ್ ಸಮಿತಿ ಸದಸ್ಯ ಸೈಯದ್ ಅಶ್ರಫ್ ತಂಙಳ್ ಆದೂರು, ಆರೋಗ್ಯ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಯು.ಟಿ. ಖಾದರ್, ಕರ್ನಾಟಕ ರಾಜ್ಯ ಹಜ್ ನಿರ್ವಹಣಾ ಸಮಿತಿ ಅಧ್ಯಕ್ಷ ಹಾಜಿ ಡಾ. ಯೆನೆಪೋಯ ಅಬ್ದುಲ್ಲ ಕುಂಞಿ , ವಿಧಾನಪರಿಷತ್ ಸಭಾಪತಿ ಸಲೀಂ ಅಹ್ಮದ್, ಸಚಿವರಾದ ಝಮೀರ್ ಅಹ್ಮದ್ ಖಾನ್, ರಿಝ್ವಾನ್ ಅರ್ಷದ್, ಕರ್ನಾಟಕ ರಾಜ್ಯ ಹಜ್ ಸಮಿತಿ ಅಧ್ಯಕ್ಷ ಸಯ್ಯದ್ ಝುಲ್ಫೀಕರ್ ಖಾನ್ ಟಿಪ್ಪು, ಹಾಜಿ ಎಸ್.ಎಂ. ರಶೀದ್, ಬಿ.ಎ. ಅಬ್ದುಲ್ ನಾಸಿರ್ ಲಕ್ಕಿಸ್ಟಾರ್, ಲೋಕಸಭಾ ಸದಸ್ಯ ಬ್ರಿಜೇಶ್ ಚೌಟ, ಶಾಸಕರಾದ ಉಮಾನಾಥ ಕೋಟ್ಯಾನ್, ರಾಜ್ಯಸಭಾ ಸದಸ್ಯ ನಾಸೀರ್ ಹುಸೈನ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor