ಮಂಗಳೂರು | 'ಕರಾವಳಿ ಉತ್ಸವ': ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪೂರ್ವಭಾವಿ ಸಭೆ
Update: 2025-11-28 15:26 IST
ಮಂಗಳೂರು: ಮಂಗಳೂರಿನಲ್ಲಿ ಡಿಸೆಂಬರ್ ನಲ್ಲಿ ನಡೆಸಲು ಉದ್ದೇಶಿಸಿರುವ 'ಕರಾವಳಿ ಉತ್ಸವ'ದ ಪೂರ್ವಭಾವಿ ಸಭೆಯು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿಂದು ಮಂಗಳೂರಿನ ವಿಮಾನ ನಿಲ್ದಾಣದ ಸಭಾಂಗದಲ್ಲಿ ಜರುಗಿತು.
ಪ್ರತಿ ವರ್ಷದಂತೆ ಈ ಬಾರಿಯೂ ಕರಾವಳಿ ಉತ್ಸವಕ್ಕೆ ವಿಶ್ವಾದ್ಯಂತ ಸಾವಿರಾರು ಜನ ಬರುವ ನಿರೀಕ್ಷೆ ಇರುವುದರಿಂದ ಯಾವುದೇ ಕೊರತೆಯಾಗದಂತೆ ಅಗತ್ಯ ಸೌಕರ್ಯಗಳನ್ನು ಒದಗಿಸುವುದು ಸೇರಿದಂತೆ ಸೂಕ್ತ ತಯಾರಿ ಮಾಡಿಕೊಂಡು ಯಶಸ್ವಿಯಾಗಿ ಉತ್ಸವ ನಡೆಸಲು ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಿ ಕರ್ತವ್ಯ ನಿರ್ವಹಿಸಬೇಕು. ಯಾವುದೇ ಅಹಿತಕರ ಘಟನೆಗಳಾಗದಂತೆ ಕಾನೂನು ಸುವ್ಯವಸ್ಥೆ ಕಾಪಾಡಬೇಕೆಂದು ಅಧಿಕಾರಿಗಳಿಗೆ ಸಚಿವರು ಸೂಚಿಸಿದೆ.
ಸಭೆಯಲ್ಲಿ ಜಿಲ್ಲಾಧಿಕಾರಿ ಎಚ್.ವಿ.ದರ್ಶನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕೆ., ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನರ್ವಾಡೆ ವಿನಾಯಕ್ ಕರ್ಬಾರಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.