×
Ad

ಮಂಗಳೂರು: ಪರಿಶಿಷ್ಟ ಜಾತಿ ಬಾಲಕಿಯರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡ ಉದ್ಘಾಟನೆ

Mangalore: New building for girls' hostel inaugurated

Update: 2023-09-20 12:09 IST

ಮಂಗಳೂರು, ಸೆ.20: ನಗರದ ಕೊಡಿಯಾಲ್ ಬೈಲ್ ನಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ನಿರ್ಮಿಸಲಾಗಿರುವ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ ಬಾಲಕಿಯರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡವನ್ನು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಬುಧವಾರ ಉದ್ಘಾಟಿಸಿದರು.

ರಾಜ್ಯ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಗಣ್ಯರು ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಕುದ್ಮಲ್ ರಂಗ ರಾವ್ ಅವರ ಭಾವಚಿತ್ರಕ್ಕೆ ಪುಪ್ಷಾರ್ಚನೆ ಮಾಡಿದರು.

ಶಾಸಕ ಡಿ.ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ., ಜಿಪಂ ಸಿಇಒ ಡಾ. ಆನಂದ್, ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

 

 

 

 

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News