×
Ad

ಮಂಗಳೂರು: ಕಾಂಗ್ರೆಸ್ ಪಕ್ಷದಿಂದ ಮೌನ ಪ್ರತಿಭಟನೆ

Update: 2023-07-12 11:58 IST

ಮಂಗಳೂರು, ಜು.12: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ರಾಜಕೀಯ ಜೀವನ ಮುಗಿಸಲು ಕೇಂದ್ರ ಸರಕಾರ ಪಿತೂರಿ ರೂಪಿಸುತ್ತಿದ್ದು, ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಇಂದು ಬೆಳಗ್ಗೆ ನಗರದಲ್ಲಿ ಮೌನ ಪ್ರತಿಭಟನೆ ಆರಂಭಿಸಲಾಗಿದೆ.

ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ಮತ್ತು ಮಂಗಳೂರು ನಗರ ಸಮಿತಿಯ ನೇತೃತ್ವದಲ್ಲಿ ನಗರದ ಪುರಭವನದ ಎದುರಿನ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಯುತ್ತಿದೆ.

ಮಾಜಿ ಶಾಸಕ ಜೆ.ಆರ್.ಲೋಬೊ ನೇತೃತ್ವದಲ್ಲಿ ನಡೆಯುತ್ತಿರುವ ಮಹಾತ್ಮ ಗಾಂಧಿ ಪ್ರತಿಮೆಗೆ ಹಾರಾರ್ಪಣೆ ಮಾಡುವ ಮೂಲಕ ಪ್ರತಿಭಟನೆಗೆ ಚಾಲನೆ ನೀಡಲಾಯಿತು. ಉತ್ತರ ಪ್ರದೇಶದ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ, ಮಾಜಿ ಸಚಿವ ನಕುಲ್ ದುಬೆ ಸಹಿತ ಹಲವಾರು ಸ್ಥಳೀಯ ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದಾರೆ. 

 

 

 

 

 

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News