×
Ad

ಮಂಗಳೂರು: ಖ್ಯಾತ ಯುರೋಲಜಿಸ್ಟ್ ಡಾ.ಲಕ್ಷ್ಮಣ ಪ್ರಭು ನಿಧನ

Update: 2023-11-17 09:22 IST

ಮಂಗಳೂರು: ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಖ್ಯಾತ ಮೂತ್ರಶಾಸ್ತ್ರಜ್ಞ ಡಾ.ಜಿ.ಜಿ.ಲಕ್ಷ್ಮಣ ಪ್ರಭು(61) ಇಂದು ಬೆಳಗ್ಗೆ ನಿಧನ ಹೊಂದಿದರು.

ವಾರದ ಹಿಂದೆ ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿದ್ದ ವೇಳೆ ಡಾ.ಜಿ.ಜಿ.ಲಕ್ಷ್ಮಣ ಪ್ರಭು ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದರು. ಆ ಬಳಿಕ ಅವರು ಮಂಗಳೂರಿನ ಆಸ್ಪತ್ರೆಯಲ್ಲಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಬೆಳಗ್ಗೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News