×
Ad

ಮಂಗಳೂರು: ಕ್ಯಾಬ್ ಚಾಲಕನಿಗೆ ಕರೆ ಮಾಡಿ ಅಪಹಾಸ್ಯ, ನಿಂದನೆ; ಪ್ರಕರಣ ದಾಖಲು

Update: 2025-10-11 12:56 IST

ಮಂಗಳೂರು: ಕ್ಯಾಬ್ ಚಾಲಕರೊಬ್ಬರಿಗೆ ಕರೆ ಮಾಡಿ ಅಪಹಾಸ್ಯವಾಗಿ ಮಾತನಾಡಿ ನಿಂದಿಸಿರುವ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಬಗ್ಗೆ ವರದಿಯಾಗಿದೆ.

ಘಟನೆ ವಿವರ: 

ಅ. 09 ರಂದು ರಾತ್ರಿ ಕೇರಳ ಮೂಲದ ಸಂತೋಷ್ ಅಬ್ರಾಹಂ, ಜಯಕೃಷ್ಣನ್ ಮತ್ತು ವಿಮಲ್ ಎಂಬವರು Uber ಮತ್ತು Rapido Captain ಆಪ್ ಮೂಲಕ ಕ್ಯಾಬ್ ಬುಕ್ ಮಾಡಿ ಮಂಗಳೂರಿನ  ಬಿಜೈ ನ್ಯೂ ರೋಡ್ ಗೆ ಪಿಕ್ ಅಪ್ ಅಡ್ರೆಸ್ ನೀಡಿದ್ದರು. ಇದನ್ನು ನೋಡಿ  ಕ್ಯಾಬ್ ಚಾಲಕ ಅಹ್ಮದ್ ಶಫೀಕ್ ರವರು ಆ್ಯಪ್‌ ಮೂಲಕ ಕಾಲ್ ಮಾಡಿ ಪಿಕ್ ಆಪ್ ಬಗ್ಗೆ ವಿಚಾರಿಸಿದಾಗ ಆ ಕಡೆಯಿಂದ ಹಿಂದಿ ಭಾಷೆಯಲ್ಲಿ ಮಾತನಾಡಿ ಮುಸ್ಲಿಂ ತೀವ್ರವಾದಿ, ಟೆರರಿಸ್ಟ್, ಎಂದು ಅಪಹಾಸ್ಯವಾಗಿ ಮಾತನಾಡಿ, ಮುಸ್ಲಿಮ್ ಟೆರರಿಸ್ಟ್ ಎಂದು ಹಿಂದಿ ಭಾಷೆಯಲ್ಲಿ ಬೊಬ್ಬೆ ಹಾಕಿ, ಮಲಯಾಳಂ ಭಾಷೆಯಲ್ಲಿ ತಾಯಿಗೆ ಅವಾಚ್ಯವಾಗಿ ಬೈದಿರುತ್ತಾರೆ ಎನ್ನಲಾಗಿದೆ.

ಈ ಬಗ್ಗೆ ಕ್ಯಾಬ್ ಚಾಲಕ ಅಹ್ಮದ್ ಶಫೀಕ್ ರವರು ನೀಡಿದ ದೂರಿನಂತೆ ದಿನಾಂಕ: 10.10.2025 ರಂದು ಉರ್ವ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ: 103/2025 ಕಲಂ: 352, 353(2) ಬಿ.ಎನ್.ಎಸ್ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ  ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News