×
Ad

ಮಂಗಳೂರು | ಮಾದಕ ವಸ್ತು ಮಾರಾಟ ಮಾಡುತ್ತಿದ್ದವನ ಸೆರೆ

Update: 2025-04-17 08:24 IST
ಬಂಧಿತ ಆರೋಪಿ

ಮಂಗಳೂರು : ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಕೋರಿಯರ್4 ಮೂಲಕ ಖರೀದಿಸಿಕೊಂಡು ಮಂಗಳೂರು ನಗರದ ಲಾಲ್ ಭಾಗ್ ಪರಿಸರದಲ್ಲಿ ಮಾರಾಟ ಮಾಡುತ್ತಿದ್ದವನನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿ 11 ಗ್ರಾಂ ಎಂಡಿಎಂಎ ಅನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತರನ್ನು ಸುಳ್ಯದ ಪೆರುವಾಜೆ ಗ್ರಾಮದ ಅಲಂತಡ್ಕದ ನಿವಾಸಿ ಮುಹಮ್ಮದ್ ಅಶ್ರಪ್ ಅಲಂತಡ್ಕ(50) ಎಂದು ಗುರುತಿಸಲಾಗಿದೆ.

ದೆಹಲಿಯಿಂದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎನ್ನು ಕೋರಿಯರ್ ಮೂಲಕ ತರಿಸಿಕೊಂಡು ಮಂಗಳೂರಿಗೆ ತಂದು ಮಂಗಳೂರು ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಎಂಡಿಎಂಎ ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದುಕೊಂಡು ಆತನಿಂದ 1 ಲಕ್ಷ ರೂ. ಮೌಲ್ಯದ 11 ಗ್ರಾಂ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ, ಮೊಬೈಲ್ ಫೋನ್-1, ಹೊಂಡಾ ಅಕ್ಟಿವಾ ಸ್ಕೂಟರ್ ಸಹಿತ ಒಟ್ಟು 1,60,000 ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಯು ದೆಹಲಿಯಿಂದ ತನ್ನ ಸ್ನೇಹಿತನ ಮೂಲಕ ನಿಷೇಧಿತ ಮಾದಕ ವಸ್ತು ಎಂಡಿಎಂಎ ನ್ನು ಖರೀದಿಸಿಕೊಂಡು ಅದನ್ನು ತನ್ನ  ಊರಾದ ಸುಳ್ಯದ ವಿಳಾಸಕ್ಕೆ ಕೋರಿಯರ್ ಮೂಲಕ ತರಿಸಿ ಅಕ್ರಮ ಲಾಭಗಳಿಸುವ ಉದ್ದೇಶದಿಂದ ಮಂಗಳೂರಿಗೆ ತನ್ನ ದ್ವಿಚಕ್ರ ವಾಹನದಲ್ಲಿ ನಗರದಲ್ಲಿನ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ.

ಕಾರ್ಯಚರಣೆಯಲ್ಲಿ ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ರವರ ಮಾರ್ಗದರ್ಶನದಲ್ಲಿ ಪೊಲೀಸ್ ನಿರೀಕ್ಷಕರಾದ ರಫೀಕ್ ಕೆ ಎಂ ರವರ ನೇತೃತ್ವದಲ್ಲಿ ಪಿಎಸ್ಐ ಸುದೀಪ್ ಎಂ.ವಿ., ಶರಣಪ್ಪ ಭಂಡಾರಿ, ಎಎಸ್ಐ ಮೋಹನ್ ಕೆ.ವಿ., ರಾಮ ಹಾಗೂ ಸಿಸಿಬಿ ಸಿಬ್ಬಂದಿಯವರು ಕೈಗೊಂಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News