ಮಂಗಳೂರು| ಸಾರ್ವಜನಿಕರಿಗೆ ಕಿರುಕುಳ ಪ್ರಕರಣ: ಆರೋಪ ಸೆರೆ
Update: 2025-07-29 21:02 IST
ಮಂಗಳೂರು, ಜು. 29: ಅಮಲು ಪದಾರ್ಥ ಸೇವನೆ ಮಾಡಿ ಪಂಪ್‌ವೆಲ್ ನಲ್ಲಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಆರೋಪದಲ್ಲಿ ಕಂಕನಾಡಿ ಜಪ್ಪಿನಮೊಗರು ನಿವಾಸಿ ಮಹೇಶ್ ಸಾಲಿಯಾನ್ (35) ಎಂಬಾತನನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿರುವ ಘಟನೆ ವರದಿಯಾಗಿದೆ.
ವ್ಯಕ್ತಿಯೊಬ್ಬ ರಿಕ್ಷಾ ನಿಲ್ಲಿಸಿ ಸಾರ್ವಜನಿಕರಿಗೆ ಬಯ್ಯುತ್ತಿದ್ದ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಆತನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆಗೆ ಒಳಪಡಿಸಿದಾಗ ಆತ ಗಾಂಜಾ ಸೇವನೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.
ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಮಾದವಸ್ತು ಸೇವನೆ ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಂಕನಾಡಿ ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.