×
Ad

ಮಂಗಳೂರು: ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಯ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

Update: 2024-11-21 10:07 IST

ಮಂಗಳೂರು, ನ.21: ನಗರದಲ್ಲಿರುವ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿಯವರ ಮನೆ ಮತ್ತು ಕಚೇರಿ ಮೇಲೆ ಇಂದು ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕಂಕನಾಡಿ ಸಮೀಪದ ವೆಲೆನ್ಸಿಯಾದಲ್ಲಿರುವ ಕೃಷ್ಣವೇಣಿಯವರ ನಿವಾಸ ಹಾಗೂ ನಗರದ ಮಲ್ಲಿಕಟ್ಟೆಯಲ್ಲಿರುವ ಕಚೇರಿ ಮೇಲೆ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ.

ಲೋಕಾಯುಕ್ತ ಎಸ್ಪಿ ನಟರಾಜ್ ನೇತೃತ್ವದಲ್ಲಿ ಮಂಗಳೂರು ಹಾಗೂ ಚಿಕ್ಕಬಳ್ಳಾಪುರ ಲೋಕಾಯುಕ್ತ ಅಧಿಕಾರಿಗಳ ತಂಡ ಈ ಕಾರ್ಯಾಚರಣೆ ನಡೆಸಿದ್ದು, ದಾಖಲೆಪತ್ರಗಳ ಪರಿಶೀಲನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಎರಡು ತಿಂಗಳ ಹಿಂದೆಯಷ್ಟೇ ಮಂಗಳೂರಿಗೆ ವರ್ಗಾವಣೆಯಾಗಿ ಬಂದಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News