×
Ad

ಮಂಗಳೂರು | ಡಿ.9ರಂದು ದಾಂಪತ್ಯ ಜೀವನ ಉಪನ್ಯಾಸ ಕಾರ್ಯಕ್ರಮ

Update: 2025-12-07 08:46 IST

ಸಾಂದರ್ಭಿಕ ಚಿತ್ರ | Photo Credit : freepik

ಮಂಗಳೂರು : ಅಖಿಲ ಭಾರತ ಬ್ಯಾರಿ ಪರಿಷತ್ (ರಿ.) ಮಂಗಳೂರು ವತಿಯಿಂದ ಸಮುದಾಯ ಅಭಿವೃದ್ಧಿ ಕಾರ್ಯಕ್ರಮದ ಅಂಗವಾಗಿ ದಾಂಪತ್ಯ ಜೀವನ ಉಪನ್ಯಾಸವನ್ನು ಡಿ.9ರಂದು ಮಧ್ಯಾಹ್ನ 2.ರಿಂದ ಸಂಜೆ 4.30ರವರೆಗೆ ಮಂಗಳೂರಿನ ನ್ಯಾಷನಲ್ ಟ್ಯುಟೋರಿಯಲ್ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

ಕಾರ್ಯಕ್ರಮದಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ರಾಜ್ಯ ಕಾರ್ಯದರ್ಶಿ ಮಹಮ್ಮದ್ ಕುಂಞಿ ಯವರು ಉಪನ್ಯಾಸ ನೀಡಲಿದ್ದು, ಅಖಿಲ ಭಾರತ ಬ್ಯಾರಿ ಪರಿಷತ್ (ರಿ.) ಮಂಗಳೂರು ಕೇಂದ್ರೀಯ ಸಮಿತಿ ಅಧ್ಯಕ್ಷ ಯು.ಎಚ್. ಖಾಲಿದ್ ಉಜಿರೆ ಅವರು ಸಭಾಧ್ಯಕ್ಷತೆ ವಹಿಸಲಿದ್ದಾರೆ ಎಂದು ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ನಡುಪದವು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News