×
Ad

ಮಂಗಳೂರು | ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

Update: 2025-01-10 14:34 IST

ಮಂಗಳೂರು, ಜ.10: ಮಿದುಳು ನಿಷ್ಕ್ರಿಯಗೊಂಡಿದ್ದ ಶಿವಮೊಗ್ಗದ ಮಹಿಳೆಯರೊಬ್ಬರ ಅಂಗಾಂಗ ದಾನ ಪ್ರಕ್ರಿಯೆ ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ಶುಕ್ರವಾರ ನಡೆಯಿತು.

ಮಹಿಳೆಯ ಎರಡು ಕಣ್ಣುಗಳನ್ನು ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ಹಾಗೂ ಲಿವರ್ ಅನ್ನು ಮೈಸೂರಿಗೆ ಝೀರೊ ಟ್ರಾಫಿಕ್ ನಲ್ಲಿ ಕೊಂಡೊಯ್ಯಲಾಯಿತು.

ಶಿವಮೊಗ್ಗ ರಾಗಿಗುಡ್ಡೆಯ ರೇಖಾ (41) ಎಂಬವರು ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಸ್ವಸ್ಥಗೊಂಡಿದ್ದರು. ಅವರನ್ನು ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಿ, ನಂತರ ಹೆಚ್ಚಿನ ಚಿಕಿತ್ಸೆ ಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಜ.6ರಂದು ಕರೆತರಲಾಗಿತ್ತು. ಈ ನಡುವೆ ಅವರ ಮಿದುಳು ನಿಷ್ಕ್ರಿಯಗೊಂಡಿದ್ದು ಕುಟುಂಬಸ್ಥರಿಗೆ ತಿಳಿಸಿ, ಅಂಗಾಂಗ ದಾನದ ಬಗ್ಗೆ ಅರಿವು ಮೂಡಿಸಲಾಯಿತು ಎಂದು ವೆನ್ಲಾಕ್ ಆಸ್ಪತ್ರೆಯ ವೈದ್ಯರು ತಿಳಿಸಿದರು.

ವೆನ್ಲಾಕ್ ಸರ್ಕಾರಿ ಆಸ್ಪತ್ರೆಯ 176 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ಅಂಗಾಂಗ ದಾನ ಪ್ರಕ್ರಿಯೆ ನಡೆದಿದೆ. ಎಲ್ಲ ರೀತಿಯ ಪರೀಕ್ಷೆಗಳನ್ನು ಪೂರ್ಣಗೊಳಿಸಿ, ಮಿದುಳು ನಿಷ್ಕ್ರಿಯಗೊಂಡಿರುವುದನ್ನು ಖಚಿತ ಪಡಿಸಿಕೊಂಡು ಮುಂದಿನ ಪ್ರಕ್ರಿಯೆ ನಡೆಸಲಾಯಿತು ಎಂದು ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕ ಡಾ. ಶಿವಪ್ರಕಾಶ್ ಮಾಹಿತಿ ನೀಡಿದರು.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News