×
Ad

ಮಂಜನಾಡಿ| ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಗಂಭೀರ ಗಾಯಗೊಂಡಿದ್ದ ಮತ್ತೋರ್ವ ಬಾಲಕಿ ಮೃತ್ಯು: ಸ್ಪೀಕರ್ ಯುಟಿ ಖಾದರ್ ಸಂತಾಪ

Update: 2024-12-28 22:24 IST

ಯು.ಟಿ. ಖಾದರ್

ಉಳ್ಳಾಲ: ತಾಲೂಕಿನ ಮಂಜನಾಡಿ ಗ್ರಾಮದ ಕಲ್ಕಟ್ಟದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಸುಟ್ಟ ಗಾಯಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಯಿಝ (9) ಇಂದು ಮೃತಪಟ್ಟಿದ್ದು ಸಭಾಧ್ಯಕ್ಷ ಯು.ಟಿ ಖಾದರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಕುಟುಂಬಸ್ಥರು, ವೈದ್ಯಾಧಿಕಾರಿಗಳು ಗಾಯಾಳುಗಳ ರಕ್ಷಣೆಗಾಗಿ ಶಕ್ತಿ ಮೀರಿ ಪ್ರಯತ್ನಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಮೃತಪಟ್ಟಿದ್ದು ಮನಸ್ಸಿಗೆ ಬಹಳ ಆಘಾತ ತಂದಿದೆ. ಕುಟುಂಬಸ್ಥರಿಗೆ, ಹಿತೈಷಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲು ಪ್ರಾರ್ಥಿಸುತ್ತೇನೆ. ದುರಂತ ಸಂಭವಿಸಿದ ದಿನದಿಂದ ಇಂದಿನವರೆಗೂ ಕುಟುಂಬಸ್ಥರ ಜತೆಗಿದ್ದ ಸ್ಥಳೀಯ ಮುಖಂಡರು, ಸಂಘ ಸಂಸ್ಥೆಗಳ ಕಾರ್ಯ ವೈಖರಿ ಎಲ್ಲರಿಗೂ ಮಾದರಿ ಎಂದು ಯುಟಿ ಖಾದರ್‌ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News