×
Ad

ಮಾರಿಪಳ್ಳ: ರಸ್ತೆ ವಿಭಜಕದ ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: 7 ಮಂದಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Update: 2026-04-02 06:42 IST

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಡಿವೈಡರ್ ನ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ 7 ಮಂದಿ ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಘಟನೆ ಫರಂಗಿಪೇಟೆ ಸಮೀಪದ ಮಾರಿಪಳ್ಳ ಎಂಬಲ್ಲಿ ಬುಧವಾರ ರಾತ್ರಿ  ನಡೆದಿದೆ.

ಬುಧವಾರ ರಾತ್ರಿ ಸುಮಾರು 12:45 ಗಂಟೆಗೆ ಈ ಘಟನೆ ನಡೆದಿದ್ದು, ಅಪಘಾತದಿಂದ ಗಂಭೀರ ಗಾಯಗೊಂಡ ವಿದ್ಯಾರ್ಥಿಗಳು ಉಡುಪಿ ಮೂಲದವರು ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.

ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಂಬವನ್ನೇ ಎಳೆದುಕೊಂಡು ಹೋಗಿ ಬಳಿಕ ಪಲ್ಟಿಯಾಗಿದೆ. ಕಾರಿನಲ್ಲಿ ಸುಮಾರು 4 ಮಂದಿ ವಿದ್ಯಾರ್ಥಿನಿಯರು ಹಾಗೂ 3 ಮಂದಿ ವಿದ್ಯಾರ್ಥಿಗಳು ಇದ್ದರು. ಪಲ್ಟಿಯಾದ ಕಾರನ್ನು ಎತ್ತಿ ಅವರನ್ನೆಲ್ಲ ಆಸ್ಪತ್ರೆಗೆ ಸಾಗಿಸಲಾಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಮಾರ್ಗವಾಗಿ ಮಂಗಳೂರು ಕಡೆಯಿಂದ ಬಿ.ಸಿ.ರೋಡ್ ಕಡೆಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಮಾರಿಪಳ್ಳ ಎಂಬಲ್ಲಿ ರಸ್ತೆಯ ವಿಭಜಕಕ್ಕೆ ಏರಿ ಬಳಿಕ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾಗಿದೆ.

ಅಪಘಾತದ ತೀವ್ರಕ್ಕೆ ವಿದ್ಯುತ್ ಕಂಬ ತುಂಡಾಗಿದ್ದು, ಕಾರು ಜಖಂಗೊಂಡಿದೆ. ಗಾಯಾಳು ವಿದ್ಯಾರ್ಥಿಗಳನ್ನು ಸ್ಥಳೀಯರ ಸಹಾಯದಿಂದ ತುಂಬೆ ಫಾದರ್ ಮುಲ್ಲರ್ ಹಾಸ್ಪಿಟಲ್ ಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಮುಂದಿನ ಕ್ರಮ ಕೈಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News