ಮಿಜಾರುಗುತ್ತು ಆನಂದ ಆಳ್ವ ನಿಧನ
Update: 2023-10-31 15:10 IST
ಮೂಡಬಿದಿರೆ: ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮೋಹನ್ ಆಳ್ವ ಅವರ ತಂದೆ ಮಿಜಾರುಗುತ್ತು ಆನಂದ ಆಳ್ವ(106) ನಿಧನರಾಗಿದ್ದಾರೆ.
ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಆಳ್ವಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಮೃತರು ಡಾ. ಮೋಹನ್ ಆಳ್ವ ಸಹಿತ ಮೂವರು ಪುತ್ರರು, ಓರ್ವ ಪುತ್ರಿ ಮತ್ತು ಅಪಾರ ಬಂಧುಗಳನ್ನು ಅಗಲಿದ್ದಾರೆ.