×
Ad

ಮಂಗಳೂರು | ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ವಿರುದ್ಧ ಪ್ರಕರಣ ದಾಖಲು

Update: 2026-02-26 09:53 IST

ಮಂಗಳೂರು: ಬಾಲಕ ಮತ್ತು ಬಾಲಕಿಯೊಬ್ಬಳ ಮೇಲೆ ಅನೈತಿಕ ಪೊಲೀಸ್ ಗಿರಿ ಎಸಗಿದ ಆರೋಪದಲ್ಲಿ ತಂದೆ ಮತ್ತು ಮಗನ ವಿರುದ್ಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೋಮವಾರ ಸಂಜೆ ಈ ಘಟನೆ ನಡೆದಿದ್ದು, ನಗರದ ಬಾಬುಗುಡ್ಡ ರೈಲ್ವೆ ಟ್ರ್ಯಾಕ್ ಬಳಿಯಿದ್ದ ಬಾಲಕ ಮತ್ತು ಬಾಲಕಿಯನ್ನು ತಡೆದು ನಿಲ್ಲಿಸಿದ ಆರೋಪಿಗಳಾದ ತಂದೆ ಮತ್ತು ಮಗ ಅವರಿಬ್ಬರ ವೀಡಿಯೊ ಮಾಡಿದ್ದಾರೆ. ಅಲ್ಲದೇ, ಬಾಲಕನಿಗೆ ಹಲ್ಲೆ ನಡೆಸಿ, ಜಾತಿ ನಿಂದನೆಗೈದು ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇದರ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಬಾಲಕನ ತಂದೆ ನೀಡಿದ ದೂರಿನಂತೆ ಪಾಂಡೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News