ಮುಡಿಪು : ಕಾರು ಢಿಕ್ಕಿ; ಗಾಯಗೊಂಡಿದ್ದ ಪಾದಚಾರಿ ಮೃತ್ಯು

Update: 2026-07-24 15:05 IST

ಉಳ್ಳಾಲ:   ಮುಡಿಪು ಬಳಿ ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿಯಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಗುರುವಾರ ರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ

ಅಳೇಕಲ ನಿವಾಸಿ ಅಬ್ದುಲ್ ಖಾದರ್ (66) ಮೃತ ಪಟ್ಟವರು. ಇವರು ಗುರುವಾರ ಸಂಜೆ ವೇಳೆ ಮುಡಿಪು ಬಳಿ ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ ಹೊಡೆದಿತ್ತು. ಗಂಭೀರ ಗಾಯಗೊಂಡಿದ್ದರಿಂದ ಖಾದರ್ ಅವರನ್ನು  ಕಾರು ಚಾಲಕ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಅದೇ ದಿನ ರಾತ್ರಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಮಂಗಳೂರು ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದ್ದು ,ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮೃತರು ಪತ್ನಿ, ಮೂರು ಗಂಡು,ಎರಡು ಹೆಣ್ಣು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಸಂತಾಪ: ಕಾಂಗ್ರೆಸ್ ರಾಜ್ಯ ಸಮಿತಿ ಸಂಯೋಜಕ ಫಾರೂಕ್ ಉಳ್ಳಾಲ್ ,ಕಾಂಗ್ರೆಸ್ ಮುಖಂಡ ಮುಸ್ತಫಾ ಅಬ್ದುಲ್ಲಾ,ಉಳ್ಳಾಲ ಯೂತ್ ಕಾಂಗ್ರೆಸ್ ಉಪಾಧ್ಯಕ್ಷ ಜಾಫರ್ ಯು.ಎನ್.,ಉಳ್ಳಾಲ ನಗರ ಸಭೆ ಮಾಜಿ ಅಧ್ಯಕ್ಷ ಯು.ಎ.ಇಸ್ಮಾಯಿಲ್ ಸಂತಾಪ ಸೂಚಿಸಿದ್ದಾರೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News