ಕೊಲ್ನಾಡು | ಹೆದ್ದಾರಿ ಸೂಚನಾಫಲಕಕ್ಕೆ ಕಾರು ಢಿಕ್ಕಿ : ನಾಲ್ವರಿಗೆ ಗಾಯ
Update: 2025-02-24 11:09 IST
ಮುಲ್ಕಿ : ಹೆದ್ದಾರಿ ಸೂಚನಾ ಫಲಕಕ್ಕೆ ಕಾರೊಂದು ಢಿಕ್ಕಿಯಾಗಿ ಪಲ್ಟಿಯಾದ ಘಟನೆ ಮುಲ್ಕಿ ಸಮೀಪದ ಕೊಲ್ನಾಡು ಕಿರು ಸೇತುವೆ ಬಳಿ ನಡೆದಿರುವುದು ವರದಿಯಾಗಿದೆ.
ಕಾರಿನಲ್ಲಿದ್ದ ಬಂಟ್ವಾಳ ಸಜಿಪ ಮೂಲದ ನಾಲ್ವರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಉಡುಪಿ ಜಿಲ್ಲೆಯ ಕಟಪಾಡಿಯಿಂದ ಕಂಬಳ ಮುಗಿಸಿ ವಾಪಸಾಗುತ್ತಿದ್ದ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿಸೂಚನಾ ಫಲಕಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾಗಿದೆಯೆನ್ನಲಾಗಿದೆ.
ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾಗಿದ್ದಾರೆ. ಅಪಘಾತದಿಂದ ಕೆಲ ಹೊತ್ತು ಹೆದ್ದಾರಿ ಸಂಚಾರ ವ್ಯತ್ಯಯ ಉಂಟಾಗಿದ್ದು ಕೂಡಲೇ ಸ್ಥಳಕ್ಕೆ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಕಾರನ್ನು ಸ್ಥಳದಿಂದ ತೆರವುಗೊಳಿಸಿದ್ದಾರೆ.