×
Ad

ಯುವ ಜನರೇ ದೇಶದ ಆಸ್ತಿ: ಯು.ಟಿ. ಖಾದರ್

ಮಂಗಳೂರಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Update: 2026-01-12 21:20 IST

ಮಂಗಳೂರು: ಸುಶಿಕ್ಷಿತ ಮತ್ತು ಸುಸಂಸ್ಕೃತ ಯುವ ಜನರೇ ನಮ್ಮ ದೇಶದ ಬಹುದೊಡ್ಡ ಆಸ್ತಿಯಾಗಿದೆ ಎಂದು ವಿಧಾನ ಸಭೆಯ ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ.

ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಅಂಗವಾಗಿ ಸೋಮವಾರ ನಗರದ ಪುರಭವನದಲ್ಲಿ ಯುವನಿಕ, ಮಂಗಳೂರು ವಿಶ್ವ ವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕ ಮತ್ತು ಹೆಲ್ತ್ ವಾಲಂಟೀರ್ಸ್ ಸಹಯೋಗದಲ್ಲಿ ಆಯೋಜಿಸಲಾದ ರಾಷ್ಟ್ರೀಯ ಯುವ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

ಮಂಗಳೂರು ವಿಶ್ವವಿದ್ಯಾನಿಲಯ ಉಪಕುಲಪತಿ ಪ್ರೊ.ಪಿ. ಎಲ್. ಧರ್ಮ ,ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯ ನಿರ್ದೇಶಕ ಫಾ. ವಿಲ್ಫ್ರೇಡ್ ಪ್ರಕಾಶ್ ಡಿಸೋಜ, ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ರಾಜ್ಯ ಬೀಜ ಮತ್ತು ಸಾವಯವ ದೃಢೀಕರಣ ಸಂಸ್ಥೆಯ ಅಧ್ಯಕ್ಷೆ ಲಾವಣ್ಯ ಬಳ್ಳಾಲ್ ಜೈನ್ , ಕರ್ನಾಟಕ ರಾಜ್ಯ ಗಾಣಿಗ ಅಭಿವೃದ್ಧಿ ಮಂಡಳಿ ಅಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್, ಮಂಗಳೂರು ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯ ರಘುರಾಜ್ ಕದ್ರಿ ,ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ಶಾಲೆಟ್ ಪಿಂಟೊ, ಎನ್‌ಎಸ್‌ಎಸ್ ಕಾರ್ಯಕ್ರಮ ಸಂಯೋಜಕ ಡಾ. ಶೇಷಪ್ಪ ಅಮೀನ್ ,ಹಿರಿಯ ವಕೀಲ ದಿನಕರ ಶೆಟ್ಟಿ, ಶ್ರೀನಿವಾಸ್ ವಿಶ್ವವಿದ್ಯಾನಿಲಯ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಅಂಡ್ ಕಾಮರ್ಸ್, ಇನ್‌ಸ್ಟಿಟ್ಯೂಟ್ ಆಫ್ ಪೋರ್ಟ್ ಶಿಪ್ಪಿಂಗ್ ಮತ್ತು ಲಾಜಿಸ್ಟಿಕ್ಸ್ ಮ್ಯಾನೇಜ್ಮೆಂಟ್ ಡೀನ್ ಡಾ. ವೆಂಕಟೇಶ್ ಅಮೀನ್,

ಕರಾವಳಿ ಸಂಸ್ಥೆ ಉಡುಪಿ ಪ್ರಾಂಶುಪಾಲರು ಎಂ. ಜೈಕಿಶನ್ ಭಟ್ ಉಪಸ್ಥಿತರಿದ್ದರು. ಯುವನಿಕ ಸಂಯೋಜಕ ರಘುವೀರ್ ಸೂಟರಪೇಟೆ ಪ್ರಾಸ್ತಾವಿಕವಾಗಿ ಮಾತನಾಡಿದರು.

ಯುವನಿಕ ನಿರ್ದೇಶಕ ಕೆ.ಕಸ್ತೂರಿ, ಸ್ವಯಂ ಸೇವಕರಾದ ಹಿತೇಶ್, ಸುಹಾನಿ, ಪವನ್, ಸಂತೋಷ್ ಯಾದವ್, ಸಂಜನಾ, ದೀಕ್ಷಿತ್ ನಾಯಕ್ ಉಪಸ್ಥಿತರಿದ್ದರು.

ವೈಶಾಲಿ ಮತ್ತು ನಿಹಾಲ್ ಕಾರ್ಯಕ್ರಮ ನಿರ್ವಹಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News