×
Ad

ಪಕ್ಷಿಕೆರೆ: ಮಹಿಳೆಯ ಸ್ನಾನದ ವೀಡಿಯೊ‌ ಚಿತ್ರೀಕರಣ ಪ್ರಕರಣ: ಆರೋಪಿಗೆ ನ್ಯಾಯಾಂಗ ಬಂಧನ

Update: 2023-08-05 14:05 IST

ಮಂಗಳೂರು: ಮುಲ್ಕಿಯ ಪಕ್ಷಿಕೆರೆ ಸಂಘಪರಿವಾರದ ಕಾರ್ಯಕರ್ತನೋರ್ವ‌ ನೆರೆ‌ ಮನೆಯ ಮಹಿಳೆಯೊಬ್ಬರು ಬಚ್ಚಲು ಕೋಣೆಯಲ್ಲಿ ಸ್ನಾನ ಮಾಡುವುದನ್ನು ಮೊಬೈಲ್ ನಲ್ಲಿ ಚಿತ್ರೀಕರಿಸುತ್ತಿದ್ದ ಪ್ರಕರಣ‌ ಹೊಸ ತಿರುವು ಪಡೆದುಕೊಂಡಿದೆ.

ಘಟನೆಗೆ‌‌ ಸಂಬಂಧಿಸಿದ ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಲು ಆರಂಭಿಸಿದಂತೆ ಎಚ್ಚೆತ್ತುಕೊಂಡ ಪೊಲೀಸರು, ಆರೋಪಿ ಸುಮಂತ್ ಪೂಜಾರಿ ಯನ್ನು ರಾತ್ರಿ ಬಂಧಿಸಿ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನವಾಗಿದೆ ಎಂದು ತಿಳಿದು ಬಂದಿದೆ.

ಈ ಸಂಬಂಧ ಮಾಹಿತಿ ನೀಡಿರುವ ಮಂಗಳೂರು ನಗರ ಪೊಲೀಸ್ ಆಯುಕ್ತ, ಘಟನೆಗೆ ಸಂಬಂಧಿಸಿ ಪ್ರಜ್ವಲ್ ಎಂಬವರು ಮುಲ್ಕಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಆರೋಪಿ ಸುಮಂತ್ ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ನ್ಯಾಯಾಲಯವು ಸುಮಂತ್ ಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಮೊಬೈಲ್ ಫೋನ್ ನ್ನು ಎಫ್ಎಸ್ಎಲ್ ತನಿಖೆಗೆ ಕಳುಹಿಸಲಾಗಿದ್ದು, ವರದಿಯ ಬಳಿಕ ಹೆಚ್ಚಿನ ಮಾಹಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News