ಸಹಕಾರ ಸಂಘ ಮತ್ತು ಹಾಲು ಉತ್ಪಾದಕರ ಸಹಕಾರ ಸಂಘದ ಸಿಬ್ಬಂದಿಗಳಿಗೆ ನೂತನ ಸೇವಾ ಭದ್ರತೆಯ ನಿಯಮ: ಸಚಿವ ಕೆ.ಎನ್. ರಾಜಣ್ಣ
ಮಂಗಳೂರು: ರಾಜ್ಯದ ಸಹಕಾರಿ ಸಂಘ ಹಾಗೂ ಹಾಲು ಉತ್ಪಾದಕರ ಸಹಕಾರ ಸಿಬ್ಬಂದಿಗಳಿಗೆ ನೂತನ ಸೇವಾ ಭದ್ರತೆ ನೀಡುವ ತಿದ್ದುಪಡಿ ಮಸೂದೆ ಶೀಘ್ರದಲ್ಲೇ ಜಾರಿಯಾಗಲಿದೆ ಎಂದು ಸಹಕಾರ ಸಚಿವರಾದ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ.
ಅವರು ಶುಕ್ರವಾರ ಎಸ್ ಸಿಡಿಸಿಸಿ ಬ್ಯಾಂಕಿನ ಸಭಾಂಗಣದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿದ್ದರು.
ಸಹಕಾರಿ ಕ್ಷೇತ್ರದ ನಿಯಮ 128(ಎ)ಕ್ಕೆ ತಿದ್ದುಪಡಿ ತಂದು ಸಹಕಾರ ಕ್ಷೇತ್ರ ಮತ್ತು ಹಾಲು ಉತ್ಪಾದಕರ ಸಹಕಾರ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಸೇವಾ ಭದ್ರತೆ ದೊರೆಯಲಿದೆ ಕಳೆದ ಹತ್ತು ವರ್ಷಗಳಿಂದ ಇರುವ ಕಾನೂನಿನಲ್ಲಿ ಬದಲಾವಣೆಯಾಗಲಿದೆ ಎಂದು ರಾಜಣ್ಣ ತಿಳಿಸಿದ್ದಾರೆ.
ರಾಜ್ಯ ದಲ್ಲಿ ಶೂನ್ಯ ಬಡ್ಡಿ ದರದಲ್ಲಿ ರೈತರಿಗೆ ನೀಡಲಾಗುವ ಸಾಲದ ಪ್ರಮಾಣ ವನ್ನು 3ಲಕ್ಷ ದಿಂದ 5ಲಕ್ಷ ರೂ.ಗಳಿಗೆ ಏರಿಸಲಾಗಿದೆ. ಶೇ 3ರ ಪ್ರಮಾಣದ ಮಧ್ಯಾವಧಿ ಸಾಲದ ಪ್ರಮಾಣವನ್ನು 15ಲಕ್ಷ ರೂಪಾಯಿಗಳಿಗೆ ಏರಿಸಲಾಗಿದೆ ಎಂದು ರಾಜಣ್ಣ ತಿಳಿಸಿದ್ದಾರೆ.
ರಾಜ್ಯದಲ್ಲಿ ಹೈನುಗಾರರ ಮೂಲಕ ಖರೀದಿಯ ಹಾಲಿನ ರೂ. 3 ಹೆಚ್ಚುವರಿ ನೀಡಲಾಗುತ್ತದೆ. ಆದರೆ ಗ್ರಾಹಕರ ಹಾಲಿನ ದರ ಏರಿಕೆಯ ಪ್ರಸ್ತಾಪ ಇಲ್ಲ ಎಂದು ರಾಜಣ್ಣ ತಿಳಿಸಿದ್ದಾರೆ. ಎಸ್ ಸಿಡಿಸಿಸಿ ಬ್ಯಾಂಕ್ ರಾಜ್ಯದಲ್ಲಿ ಮುಂಚೂಣಿಯಲ್ಲಿದೆ ಎಂದು ರಾಜಣ್ಣ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್, ನಿರ್ದೇಶಕ ದೇವಿ ಪ್ರಸಾದ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.