×
Ad

ಮಂಗಳೂರು: ಅನೈತಿಕ ಪೊಲೀಸ್ ಗಿರಿ ಪ್ರಕರಣ; ಇಬ್ಬರ ಬಂಧನ

Update: 2023-11-28 09:57 IST

 ಅಕ್ಷಯ್ ರಾವ್ | ಶಿಬಿನ್ ಪಡಿಕ್ಕಲ್

ಮಂಗಳೂರು, ನ.28: ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಅಂಗಡಿಯೊಂದರ ಇಬ್ಬರು ಉದ್ಯೋಗಿಗಳ ಮೇಲೆ ಅನೈತಿಕ ಪೊಲೀಸ್ ಗಿರಿ ಎಸಗಿದ ಇಬ್ಬರು ಆರೋಪಿಗಳನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳನ್ನು ಅಕ್ಷಯ್ ರಾವ್ ಮತ್ತು ಶಿಬಿನ್ ಪಡಿಕ್ಕಲ್ ಎಂದು ಗುರುತಿಸಲಾಗಿದೆ.

ಸೋಮವಾರ ರಾತ್ರಿ ಸುಮಾರು 8 ಗಂಟೆಗೆ ನಗರದ ಮುಳಿಹಿತ್ಲು ಎಂಬಲ್ಲಿನ ಎಂಎಸ್ ಸ್ಪೋರ್ಟ್ಸ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ನೂರುಲ್ಲಾ ಅಮೀನ್ ಮತ್ತು ಸೌಜನ್ಯಾ ಎಂಬವರು ಮೊಬೈಲ್ ರಿಪೇರ್ ಮಾಡಿಸಿಕೊಂಡು ನಗರದ ಮಿಲಾಗ್ರಿಸ್ ಚರ್ಚ್ ಕಡೆಯಿಂದ ಭಗಿನಿ ಸಮಾಜದ ಕಡೆಗೆ ಬೈಕ್ ನಲ್ಲಿ ತೆರಳುವಾಗ ಈ ಇಬ್ಬರು ಆರೋಪಿಗಳು ಬೈಕ್ ನಲ್ಲಿ ಹಿಂಬಾಲಿಸಿಕೊಂಡು ಬಂದು ಅನೈತಿಕ ಪೊಲೀಸ್ ಗಿರಿ ಎಸಗಿದ ಹಿನ್ನಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 341, 354 ರ ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

 


Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News