×
Ad

ದ.ಕ. ಜಿಲ್ಲೆಯಲ್ಲಿ ಉತ್ತಮ ಮಳೆ

Update: 2023-12-10 19:53 IST

ಮಂಗಳೂರು, ಡಿ.10: ದ.ಕ.ಜಿಲ್ಲೆಯಲ್ಲಿ ಶನಿವಾರ ಮತ್ತು ರವಿವಾರ ರಾತ್ರಿ ಉತ್ತಮ ಮಳೆಯಾಗಿದ್ದು, ಡಿ.11ರ ಬೆಳಗ್ಗಿನವರೆಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.

ಜಿಲ್ಲೆಯ ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ರಾತ್ರಿ ಗುಡುಗು ಸಹಿತ ಭಾರೀ ಮಳೆಯಾಗಿದೆ. ಕೆಲವು ಕಡೆ ಸಣ್ಣಪುಟ್ಟ ಹಾನಿಯಾಗಿವೆ ಎಂದು ತಿಳಿದು ಬಂದಿದೆ.

ನಗರದಲ್ಲಿ ಶನಿವಾರ ರಾತ್ರಿ ಸುಮಾರು 12ಕ್ಕೆ ಉತ್ತಮ ಮಳೆಯಾಗಿದೆ. ಶನಿವಾರ ರಾತ್ರಿ ಪುತ್ತೂರು, ಬಂಟ್ವಾಳ, ಸುಳ್ಯ, ಬೆಳ್ಳಾರೆ ಸುತ್ತಮುತ್ತ ಬಿರುಸಿನ ಮಳೆಯಾಗಿದ್ದರೆ ರವಿವಾರ ಬೆಳ್ತಂಗಡಿಯ ಹಲವು ಕಡೆಗಳಲ್ಲಿ ಭಾರೀ ಮಳೆಯಾಗಿದೆ.

ಜಿಲ್ಲೆಯಾದ್ಯಂತ ಕೆಲವು ವಾರಗಳಿಂದ ಮಳೆ ಮಾಯವಾಗಿತ್ತು. ಆದರೆ ಈ ವಾರದಲ್ಲಿ ಎರಡು ಬಾರಿ ರಾತ್ರಿ ವೇಳೆ ಉತ್ತಮ ಮಳೆಯಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News