×
Ad

ನಿಯಮಾನುಸಾರ ನೋಂದಣಿ ಮಾಡದ ಆರೋಪ: ಆಸ್ಪತ್ರೆಯ ಸ್ಕ್ಯಾನಿಂಗ್ ಯಂತ್ರ ವಶಕ್ಕೆ

Update: 2023-12-28 19:41 IST

ಫೈಲ್‌ ಫೋಟೊ

ಮಂಗಳೂರು: ನಿಯಮಾನುಸಾರ ನೋಂದಣಿ ಮಾಡದೆ ಖಾಸಗಿ ಆಸ್ಪತ್ರೆಯಲ್ಲಿ ಬಳಕೆ ಮಾಡುತ್ತಿದ್ದ ಸ್ಕ್ಯಾನಿಂಗ್ ಯಂತ್ರ ವನ್ನು ಆರೋಗ್ಯ ಇಲಾಖೆ ವಶಪಡಿಸಿಕೊಂಡಿದೆ.

ಬೆಳ್ತಂಗಡಿ ಅಭಯ ಆಸ್ಪತ್ರೆಗೆ ಗುರುವಾರ ಭೇಟಿ ನೀಡಿದ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ತಿಮ್ಮಯ್ಯ ನೇತೃತ್ವದ ಅಧಿಕಾರಿ ತಂಡವು ತಪಾಸಣೆ ನಡೆಸಿದ ವೇಳೆ ನೋಂದಣಿ ಮಾಡದೆ ಬಳಕೆ ಮಾಡುತ್ತಿದ್ದ ಸ್ಕ್ಯಾನಿಂಗ್ ಯಂತ್ರ ಕಂಡು ಬಂದಿದೆ. ಈ ಯಂತ್ರವನ್ನು ಬಳಸಲು ನಿಯಮಾನುಸಾರ ಆರೋಗ್ಯ ಇಲಾಖೆಯಲ್ಲಿ ನೋಂದಣಿ ಮಾಡದಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ತಕ್ಷಣ ಸ್ಕ್ಯಾನಿಂಗ್ ಯಂತ್ರವನ್ನು ವಶಪಡಿಸಿಕೊಂಡು ಜಪ್ತಿ ಮಾಡಲಾಯಿತು.

ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ದೀಪಾ ಪ್ರಭು ಮತ್ತಿತರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಮುಂದಿನ ದಿನಗಳಲ್ಲಿ ಅಕ್ರಮವಾಗಿ ಸ್ಕ್ಯಾನಿಂಗ್ ಯಂತ್ರ ಬಳಕೆ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸುವುದಾಗಿ ಜಿಲ್ಲಾ ಆರೋಗ್ಯ ಅಧಿಕಾರಿ ಎಚ್ಚರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News