ಕಣ್ಣೂರು: ಆಂಗ್ಲ ಮಾಧ್ಯಮ ಸ್ಕೂಲ್‌ನಲ್ಲಿ ‘ನಾಲೇಜ್ ಎಕ್ಸ್‌ಪೋ’ ಕಾರ್ಯಕ್ರಮ
ಮಂಗಳೂರು : ಕಣ್ಣೂರು ಎಜುಕೇಶನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್‌ನ ಅಧೀನದಲ್ಲಿರುವ ಕಣ್ಣೂರು ಆಂಗ್ಲ ಮಾಧ್ಯಮ ಸ್ಕೂಲ್‌ನಲ್ಲಿ ‘ನಾಲೇಜ್ ಎಕ್ಸ್‌ಪೋ’ ಕಾರ್ಯಕ್ರಮವು ಗುರುವಾರ ನಡೆಯಿತು.
ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ‘ನಾಲೇಜ್ ಎಕ್ಸ್‌ಪೋ’ ಸ್ಟಾಲ್‌ಗಳನ್ನು ರಾಜ್ಯ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಮಾನವನ ವ್ಯಕ್ತಿತ್ವ ವಿಕಸನ, ಅಭಿವೃದ್ಧಿಗೆ ಶಿಕ್ಷಣ ಮುಖ್ಯವಾಗಿದೆ. ಸಮಾಜ, ಸಮುದಾಯವು ಶಿಕ್ಷಣಕ್ಕೆ ಒತ್ತುಕೊಟ್ಟರೆ ಎಲ್ಲಾ ಸಮಸ್ಯೆಗೂ ಪರಿಹಾರ ಲಭಿಸಲಿದೆ. ಹಾಗಾಗಿ ಯುವ ಸಮೂಹವು ಶಿಕ್ಷಣದ ಮಹತ್ವ ಅರಿತುಕೊಂಡು ಮುನ್ನಡೆಯಬೇಕಿದೆ ಎಂದರು.
ಮುಖ್ಯ ಅತಿಥಿಯಾಗಿ ದ.ಕ.ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಖಾದರ್ ಶಾ ಭಾಗವಹಿಸಿದ್ದರು.
ಟ್ರಸ್ಟ್‌ನ ಉಪಾಧ್ಯಕ್ಷ ಕೆಬಿ ಅಬ್ದುಲ್ ರಹ್ಮಾನ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಪ್ರಧಾನ ಕಾರ್ಯದರ್ಶಿ ಎಸ್. ಉಮರಬ್ಬ, ಟ್ರಸ್ಟಿ ಹಮೀದ್ ಕೆ., ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ವಿಶಾಲಾಕ್ಷಿ ಉಪಸ್ಥಿತರಿದ್ದರು.
ಜೊತೆ ಕಾರ್ಯದರ್ಶಿ ಸಿತಾರ್ ಅಬ್ದುಲ್ ಮಜೀದ್ ಸ್ವಾಗತಿಸಿದರು. ಸಂಚಾಲಕ ರಿಯಾಝ್ ಅಹ್ಮದ್ ಕಣ್ಣೂರು ಪ್ರಾಸ್ತಾವಿಕ ವಾಗಿ ಮಾತನಾಡಿದರು. ಮುಖ್ಯ ಶಿಕ್ಷಕಿ ಸಂಶಾದ್ ವಂದಿಸಿದರು. ಶಿಕ್ಷಕಿ ಜಯಲತಾ ಕಾರ್ಯಕ್ರಮ ನಿರೂಪಿಸಿದರು.